ದಾವಣಗೆರೆ: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯ ಎಲ್ಲ ಮಂಡಲಗಳ ವ್ಯಾಪ್ತಿಯಿಂದ 1 ಲಕ್ಷ ಜನರು ತೆರಳುತ್ತಿದ್ದೇವೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

‘50 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿರುವ ಯಡಿಯೂರಪ್ಪ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರಾಗಿದ್ದ ಅವರು, ಶಿಕಾರಿಪುರ ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹುದ್ದೆಗೆ ಏರಿದವರು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಬಿಜೆಪಿ ರಾಜ್ಯ ಘಟಕಕ್ಕೆ ನಾಲ್ಕು ಬಾರಿ ಅಧ್ಯಕ್ಷರಾಗಿದ್ದರು. 7 ಬಾರಿ ಶಾಸಕ, ಒಮ್ಮೆ ಲೋಕಸಭೆ ಹಾಗೂ ವಿಧಾನಪರಿಷತ್ ಸದಸ್ಯರಾಗಿದ್ದರು. ಉತ್ತರ ಭಾರತದಲ್ಲಿದ್ದ ಬಿಜೆಪಿ ಪ್ರಾಬಲ್ಯವನ್ನು ದಕ್ಷಿಣ ಭಾರತದತ್ತ ತಂದವರು ಯಡಿಯೂರಪ್ಪ. ದಕ್ಷಿಣ ಭಾರತದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯ ಇಲ್ಲ ಎಂಬ ಮಾತನ್ನು ಸುಳ್ಳಾಗಿಸಿದರು. ಈ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ’ ಎಂದರು.

‘ಯಡಿಯೂರಪ್ಪ ಅವರು ಹೋರಾಟದ ಮೂಲಕ ಜನರ ಧ್ವನಿಯಾಗಿದ್ದರು. ರಾಜ್ಯದ ಹಲವೆಡೆ ಪಾದಯಾತ್ರೆ ಮಾಡಿ ಪಕ್ಷ ಸಂಘಟಿಸಿದ್ದಾರೆ. ಬಗರ್ಹುಕುಂ ಸಂಬಂಧ ಶಿಕಾರಿಪುರದಿಂದ ಶಿವಮೊಗ್ಗ ದವರೆಗೆ ಹಾಗೂ ಬೆಂಗಳೂರಿ ನವರೆಗೆ ನಡೆಸಿದ ಪಾದಯಾತ್ರೆಯಲ್ಲಿ ನಾನೂ ಪಾಲ್ಗೊಂಡಿದ್ದೆ’ ಎಂದು ನೆನಪಿಸಿಕೊಂಡರು.

ಬಿಜೆಪಿ ಮುಖಂಡರಾದ ಬಿ.ಜಿ. ಅಜಯ್ಕುಮಾರ್, ಲೋಕಿಕೆರೆ ನಾಗರಾಜ್, ಮಾಜಿ ಶಾಸಕ ಬಸವರಾಜ ನಾಯ್ಕ, ರುದ್ರೇಗೌಡ, ಆರನೇಕಲ್ಲು ವಿಜಯಕುಮಾರ್, ಜರೆಕಟ್ಟೆ ಹನುಮಂತಪ್ಪ, ವಿಶ್ವನಾಥ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1403759986

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.