ನವದೆಹಲಿ: ‘ದಾವಣಗೆರೆ ಉಪಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವವರು ನಮ್ಮವರೇ. ಅವರೊಂದಿಗೆ ಮಾತುಕತೆ ನಡೆಸಿ ಬಂಡಾಯ ಶಮನ ಮಾಡಲಾಗುವುದು‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಹಾಗೂ ಸಿದ್ದರಾಮಯ್ಯನವರು ದಾವಣಗೆರೆ ಹಾಗೂ ಬಾಗಲಕೋಟೆ ಪ್ರವಾಸ ಮಾಡಿ ಬಂದಿದ್ದೇವೆ. ದಾವಣಗೆರೆಯಲ್ಲಿ ಬಹಳಷ್ಟು ಜನ ನಾಮಪತ್ರ ಸಲ್ಲಿಸಿದ್ದು, ಅವರು ನಮ್ಮವರೇ. ನಮ್ಮ ನಾಯಕರೆಲ್ಲರೂ ಅವರ ಜತೆ ಮಾತನಾಡುತ್ತಾರೆ. ಎಲ್ಲವೂ ಸರಿ ಹೋಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಟುಂಬ ರಾಜಕಾರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ಪಕ್ಷಗಳಲ್ಲಿ ಕುಟುಂಬ ರಾಜಕಾರಣ ಇದೆ. ದಾವಣಗೆರೆಯಲ್ಲಿ ಮೊದಲಿನಿಂದಲೂ ಮೂರು ಜನರು ರಾಜಕಾರಣದಲ್ಲಿದ್ದರು. ನಾವೇ ಬಲವಂತ ಮಾಡಿ ಪ್ರಭಾ ಮಲ್ಲಿಕಾರ್ಜುನ ಅವರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸಿದೆವು. ಕಳೆದ ಐದಾರು ಬಾರಿಯಿಂದ ನಾವು ಅಲ್ಲಿ ಸೋಲುತ್ತಲೇ ಬಂದಿದ್ದೆವು. ಹೀಗಾಗಿ ನಾವು ಗೆಲ್ಲಬೇಕು ಎಂದು ಅವರನ್ನು ನಿಲ್ಲಿಸಿದೆವು. ಅವರು ಗೆದ್ದು ಸಂಸತ್ತಿನಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.