ದಾವಣಗೆರೆ: ‘ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅಲ್ಪಸಂಖ್ಯಾತ ನಾಯಕರ ಮೇಲೆ ಕ್ರಮಕೈಗೊಂಡ ಕಾಂಗ್ರೆಸ್ನ ಶಿಸ್ತು ಸಮಿತಿಯು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿಯ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಅಂದಾಗ ಸತ್ತು ಹೋಗಿತ್ತಾ’ ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಪ್ರಶ್ನಿಸಿದರು.

‘ಶಾಮನೂರು ಶಿವಶಂಕರಪ್ಪ ಅವರು ಎದುರಾಳಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದಾಗ ಕಾಂಗ್ರೆಸ್ನ ಶಿಸ್ತು ಸಮಿತಿ ನೋಟಿಸ್ ಕೂಡ ನೀಡಿರಲಿಲ್ಲ. ಯಾವುದೇ ರಾಜಕೀಯ ಪಕ್ಷವಿರಲಿ ದೊಣ್ಣೆ ನಾಯಕರಿಗೆ ಶಿಸ್ತು ಸಮಿತಿ ಅನ್ವಯಿಸುವುದಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘2008ರಲ್ಲಿ ಮುಸ್ಲಿಂ ಮುಖಂಡ ಸೈಯದ್ ಸೈಫುಲ್ಲಾ ಅವರಿಗೆ ಕಾಂಗ್ರೆಸ್ ‘ಬಿ’ ಫಾರಂ ನೀಡಿತ್ತು. ‘ಬಿ’ ಫಾರಂ ಕಸಿದುಕೊಂಡು, ತಿದ್ದಿದವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಯಾವ ಕ್ರಮ ಕೈಗೊಂಡಿತ್ತು? ದುಡ್ಡು ಕೊಟ್ಟು ಪಕ್ಷ ನಡೆಸುತ್ತಾರೆ, ದುಡ್ಡು ಕೊಟ್ಟು ಟಿಕೆಟ್ ಪಡೆಯುತ್ತಾರೆ. ಶ್ರೀಮಂತರಿಗೆ ಶಿಸ್ತು ಸಮಿತಿ ಇರುವುದಿಲ್ಲವಾ’ ಎಂದು ಪ್ರಶ್ನಿಸಿದರು.

‘ದಕ್ಷಿಣ ಉಪ ಚುನಾವಣೆ ವೇಳೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಕ್ಷೇತ್ರದಲ್ಲಿ ರಾಜಾರೋಷವಾಗಿ ದುಡ್ಡು ಹಂಚಲು ಸುತ್ತಾಡಿದ್ದಾರೆ. ಚುನಾವಣೆ ಹಿಂದಿನ ರಾತ್ರಿ ಕ್ಷೇತ್ರದಲ್ಲಿ ಭ್ರಷ್ಟಾಚಾರದ ಹಣ ಹಂಚಲು ಸುತ್ತಾಡಿದ್ದರು’ ಎಂದು ಆರೋಪಿಸಿದರು.

‘ಅಧಿಕಾರಿಗಳನ್ನು ತಮ್ಮ ಮನೆಯ ಸೇವಕರಂತೆ ಸಚಿವರು ಬಳಸಿಕೊಳ್ಳುತ್ತಿದ್ದಾರೆ. ಸಚಿವರಾದವರಿಗೆ ಕಾನೂನಿನ ಅರಿವು ಬೇಡವೇ? ಮಂತ್ರಿಯೇ ಹೀಗೆ ಮಾಡಿದರೆ ಪೊಲೀಸರು ಏನು ಮಾಡಲು ಸಾಧ್ಯ?’ ಎಂದು ಕಿಡಿಕಾರಿದರು.

ಪಕ್ಷದ ಮುಖಂಡರಾದ ಟಿಂಕರ್ ಮಂಜಣ್ಣ, ಬಾಲಚಂದ್ರ ಶ್ರೇಷ್ಠಿ, ಶಿವನಗೌಡ ಪಾಟೀಲ, ಕಿಶೋರಕುಮಾರ, ಮಂಜುನಾಥ, ರೇಣುಕಾಮೂರ್ತಿ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-43-1738600167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.