ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇರೆಗೆ ಇನ್ನೂ ಐವರು ಸ್ಥಳೀಯ ಮುಖಂಡರನ್ನು ಉಚ್ಚಾಟಿಸುವ ನಿರ್ಣಯ ಕೈಗೊಳ್ಳಲಾಗಿದ್ದು, ಇದನ್ನು ಕೆಪಿಸಿಸಿ ಶಿಸ್ತುಪಾಲನಾ ಸಮಿತಿಗೂ ಕಳುಹಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ತಿಳಿಸಿದರು.

‘ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರಾದ ಸಿರಾಜ್ ಅಹ್ಮದ್, ಘನಿ ತಾಹೀರ್, ಕಡತಿ ತಿಪ್ಪೇಶ್, ಮನ್ಸೂರ್ ಅಲಿ ಹಾಗೂ ಇನಾಯತ್ ಉಲ್ಲಾ ಖಾನ್ ಅವರನ್ನು ಪಕ್ಷದಿಂದ 6 ವರ್ಷ ಉಚ್ಚಾಟಿಸಿ ಜಿಲ್ಲಾ ಸಮಿತಿ ತೀರ್ಮಾನ ಕೈಗೊಂಡಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡಿರುವ ವಿಧಾನಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ಹೈಕಮಾಂಡ್ ಅವಕಾಶ ನೀಡಬಾರದು’ ಎಂದು ಮಂಜಪ್ಪ ಒತ್ತಾಯಿಸಿದರು.

ದಕ್ಷಿಣ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿ, ‘ಅಬ್ದುಲ್ ಜಬ್ಬಾರ್ ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನದಿಂದಲೂ ವಜಾಗೊಳಿಸಬೇಕು. ಅವರು ಪಕ್ಷಕ್ಕೆ ಮರಳಲು ಅವಕಾಶ ಕಲ್ಪಿಸಿದರೆ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-281126616

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.