ದಾವಣಗೆರೆ: ‘ಕಾಂಗ್ರೆಸ್ನ ಆಂತರಿಕ ಕಚ್ಚಾಟದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನವಾಗಲಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

‘ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್ ಬಣ, ಸತೀಶ್ ಜಾರಕಿಹೊಳಿ ಬಣ ಸೇರಿದಂತೆ ಹಲವು ಬಣಗಳಾಗಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಇನ್ನಿತರ ಸಚಿವರು ಬಿಜೆಪಿಯನ್ನು ಟೀಕಿಸುವ ವಿಚಾರದಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಅವರು ತಮ್ಮ ತಮ್ಮ ಇಲಾಖೆಗಳನ್ನೇ ಮರೆತಿದ್ದಾರೆ’ ಎಂದು ದೂರಿದರು.

‘ರಾಜ್ಯ ಸರ್ಕಾರ ದಿಕ್ಕು ದೆಸೆಯಿಲ್ಲದೇ ದಿವಾಳಿಯಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಹೊಂದಿಸಲಾಗದೇ ಪರದಾಡುತ್ತಿದೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಜನವಿರೋಧಿ ಸರ್ಕಾರದಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಂಘ ಪರಿವಾರವನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಈ ಮೂಲಕ ಇಡೀ ದೇಶವನ್ನು ಅಪಮಾನಿಸಿದ್ದಾರೆ. ಖರ್ಗೆ ಹೇಳಿಕೆಯು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಅವರು ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

‘ಸ್ಮಾರ್ಟ್ ಮೀಟರ್ ಅಳವಡಿಕೆಯ ಹೆಸರಿನಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹಗಲು ದರೋಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ವಿದ್ಯುತ್ ದರ ಏರಿಕೆ ಮೂಲಕ ಮತ್ತೊಮ್ಮೆ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ’ ಎಂದರು.

ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ಮುಖಂಡರಾದ ಬಿ.ಜಿ.ಅಜಯಕುಮಾರ್, ಧನಂಜಯ ಕಡ್ಲೇಬಾಳು, ರಾಜು ವೀರಣ್ಣಮ, ಪಂಜು ಪೈಲ್ವಾನ್, ಪ್ರವೀಣ ಜಾಧವ್, ರವಿಗೌಡ, ಚೇತನ್ ಹಾಗೂ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-43-1020949355

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.