ದಾವಣಗೆರೆ: ಕಾಂಗ್ರೆಸ್ನ ಹಿರಿಯ ಮುಖಂಡ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಇಲ್ಲಿನ ಮಿಲ್ಲತ್ ಎಜುಕೇಶನ್ ಆ್ಯಂಡ್ ವೆಲ್ಫೇರ್ ಸೊಸೈಟಿಯ ಸಂಸ್ಥಾಪಕ ಕಾರ್ಯದರ್ಶಿ ಸಯ್ಯದ್ ಕೆರೆಕಟ್ಟೆ ಸೈಫುಲ್ಲಾ (76) ಅವರು ಶನಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. . ಇವರಿಗೆ ಪತ್ನಿ, ಪುತ್ರ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಖಾಲಿದ್ ಸೈಫುಲ್ಲಾ ಹಾಗೂ ಐವರು ಪುತ್ರಿಯರಿದ್ದಾರೆ. ಭಾನುವಾರ ಬೆಳಿಗ್ಗೆ ನಗರದ ಪಿ.ಬಿ. ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

2008ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಇದರಿಂದ ಮುಸ್ಲಿಂ ಸಮುದಾಯದ ಕೆಲ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿತ್ತು.

ಇದರಿಂದಾಗಿ ಕೊನೆಯ ಕ್ಷಣದಲ್ಲಿ ಸಯ್ಯದ್ ಸೈಫುಲ್ಲಾ ಅವರಿಗೆ ದಾವಣಗೆರೆ ಉತ್ತರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ‘ಬಿ’ ಫಾರ್ಮ್ ನೀಡಿತ್ತು. ನಾಮಪತ್ರ ಸಲ್ಲಿಸುವ ಕೊನೆಯ ದಿನ ಕಾಂಗ್ರೆಸ್ ಮುಖಂಡ ಮಂಜುನಾಥ್ ಭಂಡಾರಿ ಅವರು ಬೆಂಗಳೂರಿನಿಂದ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ಬಂದು ‘ಬಿ’ ಫಾರ್ಮ್ ಹಸ್ತಾಂತರಿಸಿದ್ದರು. ಈ ವೇಳೆ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ಸೈಫುಲ್ಲಾ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿದ್ದರಿಂದ ಗೊಂದಲ ಉಂಟಾಗಿತ್ತು.

ಸಯ್ಯದ್ ಸೈಫುಲ್ಲಾ ಅವರು ತಮಗೆ ನೀಡಿದ್ದ ‘ಬಿ’ ಫಾರ್ಮ್ನಲ್ಲಿ ತಮ್ಮ ಹೆಸರು ಅಳಿಸಿ ಮಲ್ಲಿಕಾರ್ಜುನ್ ಅವರ ಹೆಸರು ಬರೆದು ಅವರಿಗೆ ನೀಡಿದ್ದರು. ತಿದ್ದುಪಡಿ ಮಾಡಿದ ‘ಬಿ’ ಫಾರ್ಮ್ ಸಲ್ಲಿಸಿದ ಕಾರಣಕ್ಕೆ ಮಲ್ಲಿಕಾರ್ಜುನ್ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಇದರಿಂದ ಕಾಂಗ್ರೆಸ್ನ ಅಭ್ಯರ್ಥಿಯಿಲ್ಲದೇ ಚುನಾವಣೆ ನಡೆದು, ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು.

ನಂತರ ಸೈಫುಲ್ಲಾ ಅವರು 2013ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ, ಸೋಲನುಭವಿಸಿದರು. ಬಳಿಕ ಅವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-51-1645480747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.