ದಾವಣಗೆರೆ: ‘ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ನಡುವೆ 2013ರಿಂದ ವೈಮನಸ್ಸಿದೆ. ಯಾವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಕಂದಕ ನಿರ್ಮಾಣವಾಗಿದೆ ಎಂಬುದು ಗೊತ್ತಿಲ್ಲ. ಆದರೆ, ಶಾಮನೂರು ಶಿವಶಂಕರಪ್ಪ ಬದುಕಿರುವವರೆಗೆ ಇದು ಇಷ್ಟೊಂದು ದೊಡ್ಡದಾಗಿರಲಿಲ್ಲ’ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್ ತಿಳಿಸಿದರು.

‘2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಸಭೆಗೆ ಶಾಮನೂರು ಕುಟುಂಬದ ಯಾರೊಬ್ಬರೂ ಬರಲಿಲ್ಲ. ಪಕ್ಷನಿಷ್ಠೆ ಕೈಬಿಡದೇ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದೆವು. ಸಚಿವರು ಹಾಗೂ ಜಬ್ಬಾರ್ ನಡುವಿನ ವೈಮನಸ್ಸಿನ ಲಾಭ ಪಡೆಯಲು ಅನೇಕರು ಪ್ರಯತ್ನಿಸಿದ್ದಾರೆ. ಜಬ್ಬಾರ್ ಅವರು ದೇಗುಲದ ಘಂಟೆಯಂತಾಗಿದ್ದು, ಸಿಕ್ಕವರೆಲ್ಲ ಅವರನ್ನು ಬಾರಿಸುತ್ತಿದ್ದಾರೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಹಲವು ದಿನ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿ ಕೆಲಸ ಮಾಡಿದರೂ ಪ್ರಯೋಜನವಾಗಿಲ್ಲ ಎಂಬ ಹತಾಶೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಹಾಗೂ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಕಾಡುತ್ತಿದೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಅಬ್ದುಲ್ ಗನಿ ತಾಹೀರ್ ದೂರಿದರು.

‘ಉಪಚುನಾವಣೆಯಲ್ಲಿ ಕಾರ್ಯಕರ್ತರು, ನಾಯಕರನ್ನು ವಿಶ್ವಾಸಕ್ಕೆ ಪಡೆಯಲು ಪಕ್ಷಕ್ಕೆ ಸಾಧ್ಯವಾಗಿಲ್ಲ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಸಾಕಾರಗೊಳ್ಳುವುದು ಅನುಮಾನ ಮೂಡಿಸಿದೆ. ಉಪಚುನಾವಣೆಯ ಸಂದರ್ಭದಲ್ಲಿ ಆಗಿರುವ ಈ ಸಮಸ್ಯೆ ಸಾರ್ವತ್ರಿಕ ಚುನಾವಣೆಯ ಮೇಲೂ ಪರಿಣಾಮ ಉಂಟು ಮಾಡಲಿದೆ’ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಹುಸೇನ್ ಉಕ್ಕಡಗಾತ್ರಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎ. ಅಬ್ದುಲ್ ಜಬ್ಬಾರ್, ಕಾರ್ಯದರ್ಶಿ ಆಸಿಫ್ ಜುನೈದಿ, ಮುಖಂಡರಾದ ಎಸ್.ಕೆ.ಏಜಾಜ್, ಪಿ.ಖಾಸಿಂ ಸಾಬ್, ನೂರುಲ್ಲಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-43-899444707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.