ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ಗೆ ಬೆಂಬಲ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿ ಅವರು ಮಾತನಾಡಿದರು.

‘ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಿಲ್ಲ ಎಂದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೆ. ಸಿದ್ದರಾಮಯ್ಯ, ಶಿವಕುಮಾರ್ ಅವರ ಮಾತಿಗೆ ಮನ್ನಣೆ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ’ ಎಂದರು.

‘ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ಶ್ರಮಿಸುವೆ. ವಿಜಯ ಮಾಲೆಯೊಂದಿಗೆ ಬೆಂಗಳೂರಿಗೆ ಕರೆತರುವೆ’ ಎಂದು ಸಾದಿಕ್ ಹೇಳಿದರು.

ಸಿದ್ದರಾಮಯ್ಯ ಮಾತನಾಡಿ, ನಾಲ್ಕು ದಶಕಗಳು ಕಾಂಗ್ರೆಸ್ ನಿಷ್ಠಾವಂತರಾಗಿರುವ ಸಾದಿಕ್ ಕಣದಿಂದ ಹಿಂದೆ ಸರಿದಿದ್ದಾರೆ. ಅಲ್ಲಿ ಮುಸ್ಲಿಂ ಸಮುದಾಯದ 70 ಸಾವಿರ ಮತಗಳಿವೆ. ಅವರ ಮನವೊಲಿಸುವಲ್ಲಿ ಶಾಸಕ ರಿಜ್ವಾನ್ ಅರ್ಷದ್, ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಸಲೀಂ ಅಹಮದ್ ಅವರ ಪ್ರಯತ್ನವಿದೆ. ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೇಳಿದರು.

‘ದಾವಣಗೆರೆ ಟಿಕೆಟ್ ವಿಚಾರದಲ್ಲಿ ಸಚಿವ ಜಮೀರ್ ಅಹಮದ್ ಬೇಸರಗೊಂಡಿಲ್ಲ. ಕೇರಳ ವಿಧಾನಸಭಾ ಚುನಾವಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಎರಡೂ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಕೈಜೋಡಿಸಲಿದ್ದಾರೆ’ ಎಂದು ಶಿವಕುಮಾರ್ ಪ್ರತಿಕ್ರಿಯಿಸಿದರು.

‘ನಿಗದಿತ ಅವಧಿಯ ಒಳಗೆ ನಾಮಪತ್ರ ವಾಪಸ್ ಪಡೆಯಲು ಅವರಿಗೆ ಆಗಲಿಲ್ಲ. ಕಾಂಗ್ರೆಸ್ ಪಕ್ಷವೇ ಮುಖ್ಯ. ಉಪಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕು. ದೇಶಕ್ಕೆ ದೊಡ್ಡ ಸಂದೇಶ ಹೋಗಬೇಕು ಎನ್ನುವ ಕಾರಣಕ್ಕೆ ಸಾದಿಕ್ ಅವರು ಸ್ಪರ್ಧೆಯಿಂದ ಹಿಂದೆ ಸರಿದು ಪಕ್ಷಕ್ಕೆ ಬೆಂಬಲ ಸೂಚಿಸಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.