ದಾವಣಗೆರೆ: ‘ಹಿರಿಯ ನಾಗರಿಕರನ್ನು ರಾಷ್ಟ್ರದ ಸಂಪತ್ತು ಎಂದು ಘೋಷಿಸಬೇಕು. ಆರ್ಥಿಕವಾಗಿ ದುರ್ಬಲರಾದ ಎಲ್ಲಾ ಹಿರಿಯ ನಾಗರಿಕರಿಗೆ ಮಾಸಿಕ ₹ 10,000 ವೃದ್ಧಾಪ್ಯ ವೇತನ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ, ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎ.ಪಾಟೀಲ ಒತ್ತಾಯಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ಬಜೆಟ್ ನೀಡಿ ಹಿರಿಯ ನಾಗರಿಕರ ನೀತಿ ಪ್ರಕಟಿಸಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ನಿವೃತ್ತ ಸರ್ಕಾರಿ ನೌಕರರ ಕಾನೂನುಬದ್ಧ ಸೌಲಭ್ಯಗಳ ಅನುಷ್ಠಾನಕ್ಕಾಗಿ ಸಮಿತಿ ರಚಿಸಬೇಕು ಎಂಬುದು ಸೇರಿದಂತೆ ಸಂಘದ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

‘ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಶೇ 15ರಷ್ಟಿರುವ ಹಿರಿಯ ನಾಗರಿಕರು ಮತ್ತು ನಿವೃತ್ತ ನೌಕರರು ತಮ್ಮ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡುವವರಿಗೆ ಮತ ಹಾಕಬೇಕು’ ಎಂದು ಹೇಳಿದರು.

ಸಂಘದ ಮುಖಂಡರಾದ ಸುನಂದಾ ಬೆನ್ನೂರ, ಜಗದೀಶ, ಶಿವಶಂಕರ ಐಹೊಳೆ ಸೇರಿದಂತೆ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-44-819088073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.