ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಇಟಿ: 9ರಿಂದ ಸೀಟು ಹಂಚಿಕೆ ಪ್ರಕ್ರಿಯೆ

Published 6 ಜುಲೈ 2024, 16:05 IST
Last Updated 6 ಜುಲೈ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ಡಿಪ್ಲೊಮಾ ಸಿಇಟಿಯಲ್ಲಿ (ಡಿಸಿಇಟಿ) ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಮೂರನೇ ಸೆಮಿಸ್ಟ‌ರ್‌ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ವಾಸ್ತುಶಿಲ್ಪ ಶಾಸ್ತ್ರ ಕೋರ್ಸುಗಳಿಗೆ ಜುಲೈ 9ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಅಭ್ಯರ್ಥಿಗಳಿಗೆ ತಮಗೆ ಆಸಕ್ತಿ ಇರುವ ಎಲ್ಲಾ ಕೋರ್ಸುಗಳಿಗೂ ಆದ್ಯತಾ ಕ್ರಮದಲ್ಲಿ ಇಚ್ಛೆಗಳನ್ನು ದಾಖಲಿಸಲು ಜುಲೈ 9ರಿಂದ 11ರವರೆಗೆ ಅವಕಾಶವಿರುತ್ತದೆ. ಇಚ್ಛೆಗಳನ್ನು ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯಂತೆ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಕೆಇಎ ಹೇಳಿದೆ.

ತಿದ್ದುಪಡಿ, ಪರಿಶೀಲನೆ: ಅರ್ಜಿಗಳಲ್ಲಿನ ತಪ್ಪುಗಳ ತಿದ್ದುಪಡಿಗೆ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಜುಲೈ 8ರ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿದೆ. ದಾಖಲೆಗಳ ಪರಿಶೀಲನೆ ಅಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ನಡೆಯಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT