ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆಶಿ ಆದೇಶ

Published 5 ಜೂನ್ 2023, 9:40 IST
Last Updated 5 ಜೂನ್ 2023, 9:40 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಎಂಜಿನಿಯರ್ ಗಳನ್ನು ಸೋಮವಾರ ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.

ಬೆಂಗಳೂರು ಅಭಿವೃದ್ಧಿ ಕುರಿತು ನಡೆಸುತ್ತಿರುವ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 'ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಸಲಹೆ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರೆಲ್ಲ ಇದರಲ್ಲಿ ಭಾಗಿಯಾಗಿದ್ದೀರಿ' ಎಂದು ಪ್ರಶ್ನಿಸಿದರು.

ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT