ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡುತ್ತೇವೆಂದು ದೇವೇಗೌಡರು ಮತ್ತು ಕುಮಾರಸ್ವಾಮಿ ಹೇಳಿದ್ದರು. ಹಾಗೆಂದಿದ್ದ ಅವರ ಮಾತು, ಅವರ (ಜೆಡಿಎಸ್) ಸಿದ್ಧಾಂತ ಈಗ ಎಲ್ಲಿ ಹೋಯಿತು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆಯಲ್ಲಿ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆಕೆಡಿಸಿಕೊಂಡಿಲ್ಲ. ಮುಂದೆಯೂ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದರು.
‘ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕು ಎಂದರು. ಜೆಡಿಎಸ್– ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ನಿಲುವುಗಳ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ನೀಡಬೇಕೋ ಅವರು ನೀಡುತ್ತಾರೆ. ಅವರ ರಾಜಕೀಯ ಅಸ್ತಿತ್ವಕ್ಕಾಗಿ ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.