ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಸಿಇಗಳ ವರ್ಗಾವಣೆ: ಸಿಎಂ ಅಸ್ತು– ಡಿಸಿಎಂ ಮುನಿಸು

Published : 28 ಮೇ 2025, 23:30 IST
Last Updated : 28 ಮೇ 2025, 23:30 IST
ಫಾಲೋ ಮಾಡಿ
Comments
ಏನಿದು ವಿವಾದ?:
ಹಲವು ತಿಂಗಳುಗಳಿಂದ ಹುದ್ದೆ ನಿರೀಕ್ಷೆಯಲ್ಲಿದ್ದ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯಕ್ಕೆ ಸೇರಿದ ಐವರು ಮುಖ್ಯ ಎಂಜಿನಿಯರ್‌ ವೃಂದದ ಅಧಿಕಾರಿಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಖಾಲಿ ಇದ್ದ ಹುದ್ದೆಗಳಿಗೆ ವರ್ಗಾವಣೆ ಮಾಡಿ ಮೇ 9ರಂದು ಡಿಪಿಎಆರ್‌ ಅಧಿಸೂಚನೆ ಹೊರಡಿಸಿತ್ತು. ಸ್ಥಳ ನಿಯುಕ್ತಿಗೊಳಿಸಿದ ಹುದ್ದೆಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು, ಪ್ರಭಾರ ವರ್ಗಾವಣೆ ಪ್ರಮಾಣ ಪತ್ರವನ್ನು (ಸಿಟಿಸಿ) ಸಲ್ಲಿಸಬೇಕು ಎಂದೂ ಡಿಪಿಎಆರ್‌ ನಿರ್ದೇಶನ ನೀಡಿತ್ತು. ಅದರ ಅನ್ವಯ ಎಲ್ಲ ಐವರು ಎಂಜಿನಿಯರ್‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು.
ಸಿಎಸ್‌ಗೆ ಡಿಕೆಶಿ ಬರೆದ ಟಿಪ್ಪಣಿಯಲ್ಲಿ ಏನಿದೆ?
‘ನನ್ನ ಇಲಾಖೆಗೆ ಒಳಪಡುವ ವಿಭಾಗಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಡಿಪಿಎಆರ್‌ನಿಂದ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆದ ನಂತರವೇ ಹೊರಡಿಸಬೇಕೆಂದು ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿತ್ತು. ನಂತರ ಮುಖ್ಯ ಎಂಜಿನಿಯರ್‌ಗಳ ಕರ್ತವ್ಯಕ್ಕೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಡಿಪಿಎಆರ್‌ಗೆ ವಹಿಸುವ ಕಡತದಲ್ಲಿಯೂ ಮೇಲಿನ ಸೂಚನೆಯನ್ನು ಪುನರುಚ್ಚರಿಸಿ, ಅಂತಹ ವಿಚಾರಗಳ ಬಗ್ಗೆ ನನ್ನ ಗಮನಕ್ಕೆ ತಂದು ನನ್ನ ಅನುಮೋದನೆ ಪಡೆದ ನಂತರವೇ ಡಿಪಿಎಆರ್‌ನಿಂದ ಆದೇಶ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಆದರೆ, ಮೇ 9ರಂದು ಹೊರಡಿಸಿದ ಆದೇಶದಲ್ಲಿ ನನ್ನ ಅನುಮೋದನೆ ಪಡೆಯದೆ ಕೆಲವು ಮುಖ್ಯ ಎಂಜಿನಿಯರ್‌ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದನ್ನು ನಾನು ಆಕ್ಷೇಪಿಸುತ್ತಿದ್ದೇನೆ. ಆದುದರಿಂದ ಈ ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು. ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆಯಬೇಕು’ ಎಂದು ಮುಖ್ಯ ಕಾರ್ಯದರ್ಶಿಗೆ ಮೇ 13ರಂದು ಬರೆದಿರುವ ಟಿಪ್ಪಣಿಯಲ್ಲಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT