ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಹೆಚ್ಚಳ ಮಾಡಲಾಗಿದ್ದ ಶೇ 7ರ ಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮಾರ್ಚ್ ಅಂತ್ಯದ ಒಳಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗ, ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಯ ಸಲ್ಲಿಸಿದ್ದ ವರದಿ ಪ್ರಕಾರ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್.ಟಿ) ಮೀಸಲಾತಿ ಪ್ರಮಾಣವನ್ನು ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಕ್ರಮವಾಗಿ ಶೇಕಡ 15ರಿಂದ ಶೇ 17ಕ್ಕೆ ಮತ್ತು ಶೇ 3ರಿಂದ ಶೇ 7ಕ್ಕೆ ಹೆಚ್ಚಳ ಮಾಡಲಾಗಿತ್ತು. ವಿಧಾನಸಭೆ, ವಿಧಾನ ಪರಿಷತ್ನಲ್ಲೂ ಸರ್ವಾನುಮತದಿಂದ ಅಂಗೀಕಾರವಾಗಿತ್ತು. ಆದರೆ, ಕೆಲವರು ಕೋರ್ಟ್ ಮೊರೆ ಹೋಗಿದ್ದರ ಪರಿಣಾಮವಾಗಿ ಮೀಸಲಾತಿ ಹೆಚ್ಚಳದ ಸೌಲಭ್ಯ ಪರಿಶಿಷ್ಟರಿಗೆ ಸಿಕ್ಕಿಲ್ಲ’ ಎಂದು ದೂರಿದರು.

ತಮಿಳುನಾಡು ಸರ್ಕಾರ 1994ರಲ್ಲಿ ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತಲೂ ಹೆಚ್ಚಿಸಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಆ ವಿಷಯವನ್ನು ಸೇರಿಸಿರುವುದರಿಂದ ಮೀಸಲಾತಿಗೆ ರಕ್ಷಣೆ ದೊರೆತಿದೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದರೂ ಸಂವಿಧಾನದ ಪರಿಚ್ಚೇದ– 9ಕ್ಕೆ ಸೇರಿಸುವಲ್ಲಿ ವಿಫಲವಾಯಿತು. ಈಗಲಾದರೂ ಬಿಜೆಪಿ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕಬೇಕು. ಕೋರ್ಟ್ ಮೀಸಲಾತಿ ಹೆಚ್ಚಳಕ್ಕೆ ತಡೆ ನೀಡಿದ್ದು, ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕು. ಸುಪ್ರೀಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಮಾ. 31ರ ಒಳಗೆ ಕ್ರಮಕೈಗೊಳ್ಳದಿದ್ದರೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.