ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಝಿಕಾ ವೈರಸ್ ಪತ್ತೆ: ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪರೀಕ್ಷೆ

Published 2 ನವೆಂಬರ್ 2023, 7:21 IST
Last Updated 2 ನವೆಂಬರ್ 2023, 11:10 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ತಾಲ್ಲೂಕಿನ ತಲಕಾಯಲಬೆಟ್ಟ ಸುತ್ತಲಿನ ಐದು ಕಿಲೋ ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಕೀಟ ವಿಜ್ಞಾನಿಗಳು ಪರೀಕ್ಷೆ ನಡೆಸಿದ್ದು, ಇಲ್ಲಿನ ಸೊಳ್ಳೆಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ.

ತಲಕಾಯಲಬೆಟ್ಟದಲ್ಲಿ ಝಿಕಾ ವೈರಾಣು ಪತ್ತೆಯಾದ ಬೆನ್ನಲ್ಲೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಪಾಸಣೆಗೆ ಮುಂದಾಗಿತ್ತು. ಅದರಂತೆಯೇ ತಾಲ್ಲೂಕಿನ ದಿಬ್ಬೂರಹಳ್ಳಿ, ಬಚ್ಚನಹಳ್ಳಿ, ವೆಂಕಟಾಪುರ ಗ್ರಾಮಗಳಲ್ಲಿ ಪರೀಕ್ಷೆಗಳು ನಡೆದಿದ್ದವು.

ಇದರ ಬೆನ್ನಲ್ಲೇ ಗರ್ಭಿಣಿಯರು ಹಾಗೂ ಜ್ವರ ಪೀಡಿತರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ವೈರಸ್ ಪತ್ತೆ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT