ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡಲಾಗಿದೆ.

ನೌಕರರು ತಮ್ಮ ಮೂಲ ವೇತನದ ಶೇ 10.75ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ ಶೇ 12.25ಕ್ಕೆ ಏರಿಕೆಯಾಗಲಿದೆ.

‘ಶೇ 1.50ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ. ರಾಜ್ಯದ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿ, ಅನುದಾನಿತ ಸಂಸ್ಥೆಗಳ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ಇದು ಅನ್ವಯವಾಗಲಿದೆ’ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.