ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ ಬಳಿ ಕಾಡಾನೆ ದಾಳಿ: ಮಹಿಳೆ ಸಾವು

Published 28 ಮೇ 2023, 6:35 IST
Last Updated 28 ಮೇ 2023, 6:35 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿ ಬಳಿ ಶನಿವಾರ ಸಂಜೆ ದನ ಮೇಯಿಸಲು ತೆರಳಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಹಕ್ಕಿಪಿಕ್ಕಿ ಕಾಲೋನಿ ನಿವಾಸಿ ನಾಗಮ್ಮ(46) ಮೃತ ಮಹಿಳೆ.  ಹೊಲದಲ್ಲಿ ಹಸು ಮೇಯಿಸುತ್ತಿದ್ದ ನಾಗಮ್ಮ ಮೇಲೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಕಾಲಿನಿಂದ ತುಳಿದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.  

ಆನೆಗಳು ಗ್ರಾಮಗಳತ್ತ ಬರುವುದನ್ನು ಅರಣ್ಯ ಇಲಾಖೆ ತಡೆಯಬೇಕು. ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಕಾವಲಿಗೆ ನಿಯೋಜಿಸಬೇಕು ಎಂದು ಕುಟುಂಬದವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT