ಬೆಂಗಳೂರು: ‘ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.

‘ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಕರ್ನಾಟಕ ತನ್ನದೇ ಆದ ಹೆಸರು ಮಾಡಿದೆ. ಹುಲಿಗಳ ಸಾವು ರಾಜ್ಯಕ್ಕೆ ಕಳಂಕ ತಂದಿದೆ. ಮಲೆಮಹದೇಶ್ವರ ಅರಣ್ಯವು ಹುಲಿ ಸಂತತಿ ಹೆಚ್ಚಳಕ್ಕೆ ಅಗತ್ಯ ವಾತಾವರಣ ಹೊಂದಿದೆ. ಆದರೆ, ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.