ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಕುರಿತು ನಿರ್ಧಾರ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ತಮ್ಮ ನಿವಾಸದ ಬಳಿ ಸೋಮವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯ ನಂತರ ವರಿಷ್ಠರು ಈ ಸಂಬಂಧ ನಿರ್ಧಾರ ಕೈಗೊಳ್ಳುವರು ಎಂದರು.

'ಸಂಸದೀಯ ಮಂಡಳಿ ಸಭೆಯ ನಂತರ ಪಕ್ಷದ ವೀಕ್ಷಕರು ಬೆಂಗಳೂರಿಗೆ ತೆರಳಲಿದ್ದಾರೆ. ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ನಾನೂ ವೀಕ್ಷಕರೊಂದಿಗೆ ತೆರಳುವೆ' ಎಂದು ಅವರು ತಿಳಿಸಿದರು.

'ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ನಿರ್ಧಾರ ಆಗಿದೆಯೇ?' ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಕೈಮುಗಿದು ಹೋದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.