ಬೆಂಗಳೂರು: ದೀಪಾವಳಿ ಹಬ್ಬ ಹತ್ತಿರದಲ್ಲಿದೆ. ಯಾರೂ ಭಾರ ಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವುದು ಕಂಡು ಬಂದರೆ ಅಂಥವರ ಮಾರಾಟ ಪರವಾನಗಿಯನ್ನು ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

‘ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಪಟಾಕಿ ಮಾರಾಟಗಾರರಿಂದ ಮುಚ್ಚಳಿಕೆಯನ್ನು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಬರೆಸಿಕೊಳ್ಳಬೇಕು’ ಎಂದರು.

‘15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು’ ಎಂದು ಹೇಳಿದರು.
.68 ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಅಗತ್ಯ: ಸಚಿವ ಖಂಡ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.