ವಿಚಾರಣೆ ವೇಳೆ ಯತ್ನಾಳ್ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ದೂರಿನಲ್ಲಿ ತಿಳಿಸಿರುವಂತೆ ನಮ್ಮ ಅರ್ಜಿದಾರರು ಸಚಿವ ಶಿವಾನಂದ ಪಾಟೀಲರ ಬಗ್ಗೆ ವೈಯಕ್ತಿಕ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ್ದವರು ಸಂಯುಕ್ತಾ ಪಾಟೀಲ. ಹೀಗಾಗಿ, ಭಾರತೀಯ ದಂಡ ಸಂಹಿತೆ–1860ರ ಕಲಂ 171 ಜಿ ಮತ್ತು ಜನಪ್ರತಿನಿಧಿ ಕಾಯ್ದೆ–1950ರ ಕಲಂ 123 (4) ಅನ್ನು ಯತ್ನಾಳ್ ಅವರಿಗೆ ಅನ್ವಯಿಸಿ ಪ್ರಕರಣ ನಡೆಸುವುದು ಕಾನೂನಿನ ದುರ್ಬಳಕೆ ಆಗುತ್ತದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದಲ್ಲಿನ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶಿಸಿತು.