ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವನ್ಯಜೀವಿ ಮಂಡಳಿ ರಚನೆಗೆ ವಿಳಂಬ: ಕೇಂದ್ರ ಪರಿಸರ ಸಚಿವರಿಗೆ ಪತ್ರ

Published 9 ಜುಲೈ 2024, 6:59 IST
Last Updated 9 ಜುಲೈ 2024, 6:59 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕದಲ್ಲಿ ರಾಜ್ಯ ವನ್ಯಜೀವಿ ಮಂಡಳಿ ರಚನೆಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ವನ್ಯಜೀವಿ ಸಂರಕ್ಷಣಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿ ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವ ಭೂಪೇಂದರ್ ಯಾದವ್‌ ಅವರಿಗೆ ಮನವಿ ಸಲ್ಲಿಕೆಯಾಗಿದೆ. 

ಸಚಿವರಿಗೆ ಬೆಂಗಳೂರಿನ ನಿವಾಸಿ ಅಕ್ಷೀವ್‌ ಟಿ. ಎಂಬುವರು ಈ ಸಂಬಂಧ ಮನವಿ ಸಲ್ಲಿಸಿದ್ದಾರೆ. ‘ವನ್ಯಜೀವಿ ಮಂಡಳಿಯ ಸದಸ್ಯರ ಅವಧಿ 2023ರ ಅಕ್ಟೋಬರ್‌ಗೆ ಮುಗಿದಿದೆ. ಆದರೆ, 10 ತಿಂಗಳುಗಳಿಂದ ಸದಸ್ಯರ ನೇಮಕ ಮಾಡದೆ ಕಾಲಹರಣ ಮಾಡಲಾಗುತ್ತಿದೆ. ಅರಣ್ಯ ಸಚಿವರು ಕಡತವನ್ನು ತಮ್ಮ ಬಳಿಯೇ ಇಟ್ಟುಕೊಂಡು ವಿಳಂಬ ಮಾಡುತ್ತಿದ್ದಾರೆ. ಅಧಿಕಾರಿಗಳೇ ಇರುವ ಸ್ಥಾಯಿ ಸಮಿತಿಯನ್ನು ರಚಿಸಿಕೊಂಡು ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಇದು ವನ್ಯಜೀವಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆ’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. 

ಸ್ಥಾಯಿ ಸಮಿತಿ ರಚನೆಯೇ ಅಕ್ರಮ. ಈ ಸಮಿತಿಯನ್ನು ರದ್ದುಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ವನ್ಯಜೀವಿ ಮಂಡಳಿಯನ್ನು ಕೂಡಲೇ ರಚಿಸಲು ಸೂಚನೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT