ಬೆಂಗಳೂರು: ಏಪ್ರಿಲ್ 17ರಂದು ನವದೆಹಲಿಯಲ್ಲಿ ‘ಬ್ರಿಡ್ಜ್ ಟು ಬೆಂಗಳೂರು’ ಕಾರ್ಯಕ್ರಮದಲ್ಲಿ ರಾಜತಾಂತ್ರಿಕರ ಜೊತೆಗೆ ಸಂವಾದ ನಡೆಯಲಿದೆ ಎಂದು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನವೆಂಬರ್ 17ರಿಂದ 19ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮಿಟ್ಗೆ ಪೂರ್ವಭಾವಿಯಾಗಿ ಬ್ರಿಡ್ಜ್ ಟು ಬೆಂಗಳೂರು ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

'ಜಾಗತಿಕ ಕಂಪನಿಗಳ ಜೊತೆ ಸಹಭಾಗಿತ್ವಕ್ಕಾಗಿ ಒಂದು ವರ್ಷದಿಂದ ಪ್ರತಿಫಲ ಆಧಾರಿತ ಕಾರ್ಯಕ್ರಮ ಗಳನ್ನು ರೂಪಿಸುತ್ತಿದ್ದೇವೆ. ಈ ಯೋಜನೆಗಳು ಈಗಾಗಲೇ ಸಾಕಷ್ಟು ಫಲ ನೀಡಿವೆ. ಜಾಗತಿಕ ನಾವೀನ್ಯ ಮೈತ್ರಿಕೂಟದ ನೆರವಿನೊಂದಿಗೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಇನ್ನಷ್ಟು ಅವಕಾಶಗಳನ್ನು ಸೃಷ್ಟಿಸಲಿದೆ’ ಎಂದು ಹೇಳಿದರು.

40ಕ್ಕೂ ಹೆಚ್ಚು ದೇಶಗಳು, 2,000ಕ್ಕಿಂತ ಅಧಿಕ ನವೋದ್ಯಮಗಳ ಬೆಂಬಲ ಹಾಗೂ 60ಕ್ಕೂ ಅಧಿಕ ಜಾಗತಿಕ ಮಟ್ಟದ ಒಡಂಬಡಿಕೆ ಹಾಗೂ ಬೇರೆ ಬೇರೆ ಕಂಪನಿಗಳ ಜೊತೆಗಿನ ಸಹಕಾರದೊಂದಿಗೆ ಕರ್ನಾಟಕ ಸರ್ಕಾರವು ಜಾಗತಿಕ ನಾವೀನ್ಯ ಮೈತ್ರಿಕೂಟದಲ್ಲಿ ತನ್ನದೇ ಆದ ಛಾಪನ್ನು ಮೂಡಿಸುತ್ತಿದೆ ಎಂದರು.

ಯುನೈಟೆಡ್ ಅರಬ್ ಎಮಿರೇಟ್ಸ್, ಸಿಂಗಪುರ, ಬೆಲ್ಚಿಯಂ, ಆಸ್ಟ್ರೇಲಿಯಾ, ಜರ್ಮನಿ ಮತ್ತು ಜಪಾನ್ ಸೇರಿದಂತೆ ಒಟ್ಟು 9 ದೇಶಗಳೊಂದಿಗೆ ಮಾರುಕಟ್ಟೆ ಆಧಾರಿತ ಯೋಜನೆಗಳನ್ನು ಕೈಗೊಂಡು ನವೋದ್ಯಮಿಗಳಿಗೆ ಜಾಗತಿಕವಾಗಿ ಮಾರುಕಟ್ಟೆ ವಿಸ್ತರಣೆಗೆ ನೆರವಾಗಿದೆ ಎಂದು ವಿವರಿಸಿದರು.

‘ಜಾಗತಿಕ ಸಂಸ್ಥೆಗಳಾದ ಲಂಡನ್ನ ಇಂಪೀರಿಯಲ್ ಕಾಲೇಜು, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ, ರೈಸ್ ವಿಶ್ವವಿದ್ಯಾಲಯ, ಗ್ಲಾಸ್ಗೋ ವಿಶ್ವವಿದ್ಯಾಲಯ, ಲಾ ಟ್ರೋಬ್ ವಿಶ್ವವಿದ್ಯಾಲಯ ಮೊದಲಾದ ಸಂಸ್ಥೆಗಳ ಜತೆ ರಾಜ್ಯ ಸರ್ಕಾರವು ಒಡಂಬಡಿಕೆ ಪತ್ರಗಳಿಗೆ ಸಹಿ ಹಾಕುವ ಮೂಲಕ ಅವರ ತಾಂತ್ರಿಕ ನೆರವನ್ನು ಪಡೆದುಕೊಳ್ಳಲು ಮುಂದಾಗಿದೆ. 2025ರಲ್ಲಿ ನಡೆದ ವಿವಾ ಟೆಕ್ ಸಮ್ಮೇಳನದಲ್ಲಿ ಯುರೋಪ್- ಬೆಂಗಳೂರು ಮಧ್ಯೆ ನಾವೀನ್ಯ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 2027ರ ಏಪ್ರಿಲ್ನಲ್ಲಿ ಬೆಂಗಳೂರಿನಲ್ಲಿ ಜಿಟೆಕ್ಸ್ ಎಐ ಇಂಡಿಯಾ- ಜಾಗತಿಕ ಮಟ್ಟದ ಸಮ್ಮೇಳನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಇವೆಲ್ಲ ಕಾರ್ಯಕ್ರಮಗಳ ಫಲವಾಗಿ ರಾಜ್ಯಕ್ಕೆ ಸುಮಾರು ₹5,500 ಕೋಟಿ ಮೊತ್ತದ ಜಾಗತಿಕ ಬಂಡವಾಳವು ಹರಿದು ಬರಲಿದ್ದು ಸುಮಾರು 7,200 ಉದ್ಯೋಗಗಳು ಸೃಷ್ಟಿಯಾಗಲಿವೆ. ₹6,350 ಕೋಟಿ ಬಂಡವಾಳವು ಡಾಟಾ ಕೇಂದ್ರಗಳ ಸ್ಥಾಪನೆಗೆ ಹೂಡಿಕೆಯಾಗಲಿವೆ ಎಂದು ಹೇಳಿದರು.

ಸಿ.ಎಂ, ಡಿಸಿಎಂ ಭಾಗಿ

ನವದೆಹಲಿಯಲ್ಲಿ ಏ.17ರಂದು ನಡೆಯಲಿರುವ ‘ಬ್ರಿಡ್ಜ್ ಟು ಬೆಂಗಳೂರು’ ರಾಜತಾಂತ್ರಿಕರ ಜತೆಗಿನ ಸಮಾಲೋಚನೆ ಕಾರ್ಯಕ್ರಮದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ, ಉದ್ಯಮಿ ಕಿರಣ್ ಮಜುಂದಾರ್ ಷಾಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.