ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೌರವಧನ ಪಾವತಿಗೆ ಅತಿಥಿ ಶಿಕ್ಷಕರ ಒತ್ತಾಯ

Published : 23 ಸೆಪ್ಟೆಂಬರ್ 2024, 15:57 IST
Last Updated : 23 ಸೆಪ್ಟೆಂಬರ್ 2024, 15:57 IST
ಫಾಲೋ ಮಾಡಿ
Comments

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮೂರು ತಿಂಗಳಿನಿಂದ ಗೌರವಧನ ಪಾವತಿಯಾಗಿಲ್ಲ. ಆಯಾ ತಿಂಗಳಿನಲ್ಲಿಯೇ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ಒತ್ತಾಯಿಸಿದೆ.

‘ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬೋಧನಾ ಕಾರ್ಯಕ್ಕೆ 2024–25ನೇ ಸಾಲಿಗೆ 45 ಸಾವಿರಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜೂನ್‌ನಿಂದ ಇಲ್ಲಿಯವರೆಗೂ ಗೌರವಧನ ಬಿಡುಗಡೆ ಮಾಡಿಲ್ಲ. ಕೊಡುತ್ತಿರುವ ₹10 ಸಾವಿರ ಮೊತ್ತವನ್ನು ಪ್ರತಿ ತಿಂಗಳು ನೀಡದೇ ಇದ್ದರೆ ಅತಿಥಿ ಶಿಕ್ಷಕರಿಗೆ ಕಷ್ಟವಾಗುತ್ತದೆ. ತಕ್ಷಣ ಹಣ ಬಿಡುಗಡೆ ಮಾಡಬೇಕು’ ಎಂದು ಸಂಘದ ಅಧ್ಯಕ್ಷೆ ಚಿತ್ರಲೇಖಾ ಒತ್ತಾಯಿಸಿದ್ದಾರೆ.

‘ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಿದ್ದೇವೆ. ಜೀವನ ನಡೆಸುವುದೇ ಕಷ್ಟವಾಗಿದೆ. ₹15 ಸಾವಿರಕ್ಕೆ ಹೆಚ್ಚಳ ಮಾಡಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT