ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಯವರ ಜತೆ ಚರ್ಚಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಲ್ಲವ–ಈಡಿಗ ಸಮುದಾಯಕ್ಕೆ ಸೇರಿದ ಶಾಸಕರು ಹೆಚ್ಚಿನ ಅನುದಾನಕ್ಕೆ ಪಟ್ಟು ಹಿಡಿದರು. ಬಿಜೆಪಿಯ ರಾಜೇಶ್ ನಾಯಕ್ ಅವರು ವಿಷಯ ಪ್ರಸ್ತಾಪಿಸಿದರು.

ವಿಷಯ ಪ್ರಸ್ತಾಪಿಸಿದ ರಾಜೇಶ ನಾಯಕ್ ಅವರು, ‘ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಬಿಟ್ಟರೆ ಬೇರೆ ಏನೂ ಆಗಿಲ್ಲ. ನಿಗಮಕ್ಕೆ ಹೆಚ್ಚಿನ ಅನುದಾನ ನೀಡಿ ಚಟುವಟಿಕೆಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿಯ ವಿ.ಸುನಿಲ್ಕುಮಾರ್, ‘ನಿಗಮಕ್ಕೆ ಎಂಟು ತಿಂಗಳ ಹಿಂದೆಯೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ, ನಿಗಮ ನೋಂದಣಿ ಆಗಿದ್ದು ಜನವರಿಯಲ್ಲಿ. ಬಿಜೆಪಿ ಸರ್ಕಾರ ಇದ್ದಾಗ, ಕೋಶ ಸ್ಥಾಪಿಸಿ ಮೂಲ ಧನ ₹10 ಕೋಟಿ ಇಡಲಾಗಿತ್ತು. ಅದನ್ನೇ ವರ್ಗಾವಣೆ ಮಾಡಿಕೊಂಡಿದ್ದೀರಿ. ಕನಿಷ್ಠ ₹100 ಕೋಟಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ನ ಬೇಳೂರು ಗೋಪಾಲಕೃಷ್ಣ, ಈ ನಿಗಮಕ್ಕೆ ₹500 ಕೋಟಿ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಗುರ್ಮೆ ಸುರೇಶ್ ಶೆಟ್ಟಿ , ಸೇಂದಿ ಇಳಿಸುವುದನ್ನು ನಿಷೇಧಿಸಿರುವ ಕಾರಣ 1.25 ಲಕ್ಷ ಜನ ವಲಸೆ ಹೋಗಿದ್ದಾರೆ. ಮಲೆನಾಡು–ಕರಾವಳಿ ಭಾಗದಲ್ಲಿ ಸೇಂದಿ ಇಳಿಸಲು ಅವಕಾಶ ಇದ್ದು, ಉಳಿದ ಕಡೆ ಇರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ‘ಬಿಜೆಪಿ ಅವಧಿಯಲ್ಲಿ ಕೋಶ ಸ್ಥಾಪಿಸಿ ₹10 ಕೋಟಿ ಇಟ್ಟಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ನಾವು ರೂಪು ರೇಷೆ ಸಿದ್ಧ ಮಾಡಿ ಅಭಿವೃದ್ಧಿ ನಿಗಮ ಮಾಡಿದ್ದೇವೆ. ₹10 ಕೋಟಿಯನ್ನು ನಿಗಮಕ್ಕೆ ವರ್ಗಾವಣೆ ಮಾಡಿದ್ದೇವೆ. ಹೆಚ್ಚಿನ ಅನುದಾನಕ್ಕೆ ಮುಖ್ಯಮಂತ್ರಿಯವರ ಜತೆ ಚರ್ಚಿಸುತ್ತೇನೆ’ ಎಂಬ ಭರವಸೆ ನೀಡಿದರು.

‘ನಿಗಮಕ್ಕೆ ₹50 ಕೋಟಿಯಿಂದ ₹100 ಕೋಟಿ ಅನುದಾನ ಇಡಬೇಕು ಎಂಬ ಅಪೇಕ್ಷೆ ಇದೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.