ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ವನ್ಯಜೀವಿ–ಮಾನವ ಸಂಘರ್ಷ; ದೂರುಕೋಶ ಸ್ಥಾಪಿಸಿ’: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್

‘ವನ್ಯಜೀವಿ-ಮಾನವ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ದಿನವಿಡೀ ಕಾರ್ಯಚರಣೆ ನಡೆಸುವಂತಹ ದೂರು ಕೋಶ ಸ್ಥಾಪನೆ ಮಾಡಿ‘ ಎಂದು ಹೈಕೋರ್ಟ್ ನಿರ್ದೇಶಿಸಿದೆ.
Published : 11 ಜುಲೈ 2023, 20:11 IST
Last Updated : 11 ಜುಲೈ 2023, 20:11 IST
ಫಾಲೋ ಮಾಡಿ
Comments

ಬೆಂಗಳೂರು: ‘ವನ್ಯಜೀವಿ-ಮಾನವ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ದಿನವಿಡೀ ಕಾರ್ಯಚರಣೆ ನಡೆಸುವಂತಹ ದೂರು ಕೋಶ  ಸ್ಥಾಪನೆ ಮಾಡಿ‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ವನ್ಯಜೀವಿ-ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಹೈಕೋರ್ಟ್ ನೀಡಿರುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಕೋರಿ ಕರ್ನಾಟಕ ಬೆಳೆಗಾರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ದೂರು ಕೋಶಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಈ ನಿಯಂತ್ರಣ ಕೊಠಡಿಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಜಿಲಾಸ್ಪತ್ರೆಗಳಿಗೆ ತಕ್ಷಣ ಲಭ್ಯವಾಗುವಂತೆ ವ್ಯವಸ್ಥೆ ಮಾಡಿ ಸಂಘರ್ಷದಲ್ಲಿ ತೊಂದರೆಗೆ ಒಳಗಾಗುವವರಿಗೆ ತಕ್ಷಣ ಚಿಕಿತ್ಸೆ ಲಬ್ಯವಾಗುವಂತೆ ನೋಡಿಕೊಳ್ಳಬೇಕು‘ ಎಂದು ನಿರ್ದೇಶಿಸಿದೆ.

‘ದೂರುಗಳ ಮೇಲ್ವಿಚಾರಣೆ ಮಾಡುವುದಕ್ಕಾಗಿ ವಲಯ ಅರಣ್ಯ ಅಧಿಕಾರಿ ಮತ್ತು ತಹಶೀಲ್ದಾರ್ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಈ ಸಂಬಂಧದ ವರದಿಯನ್ನು ಮೇಲಾಧಿಕಾರಿಗಳಿಗೆ ತಕ್ಷಣವೇ ರವಾನಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಸರ್ಕಾರ ರಚನೆ ಮಾಡಲಿರುವ ದೂರು ಕೋಶದ ಕುರಿತು ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತ್‌ಗಳ ನೋಟಿಸ್ ಬೋರ್ಡ್‌ನಲ್ಲಿ ಪ್ರದರ್ಶಿಸಬೇಕು‘ ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT