ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ಬಳಿಕ ಡಿಸಿಎಂ ಹುದ್ದೆ ಬೇಡಿಕೆ: ಸತೀಶ ಜಾರಕಿಹೊಳಿ

Published 26 ಜನವರಿ 2024, 12:58 IST
Last Updated 26 ಜನವರಿ 2024, 12:58 IST
ಅಕ್ಷರ ಗಾತ್ರ

ಬೆಳಗಾವಿ: ‘ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಸದ್ಯ ಹಿಂದಕ್ಕೆ ಹೋಗಿದೆ. ಲೋಕಸಭೆ ಚುನಾವಣೆ ಬಳಿಕ ಮತ್ತೆ ಮುನ್ನೆಲೆಗೆ ಬರಲಿದೆ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ವಿವಿಧ ಸಮುದಾಯಗಳಿಗೂ ಸಮಾನ ನ್ಯಾಯ ಒದಗಿಸಲು ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಬೇಡಿಕೆ ಇದ್ದೇ ಇದೆ’ ಎಂದರು.

‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆರಂಭವಾಗಿದೆ. ಕೆಲ ನಾಯಕರು ತಮ್ಮ ನಿಷ್ಠೆ ಮರೆಯುತ್ತಿದ್ದಾರೆ. ತಮ್ಮ ನಿಲುವುಗಳ ಕುರಿತು ಜಗದೀಶ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರೇ ಪ್ರತಿಕ್ರಿಯಿಸಬೇಕು, ನಾನಲ್ಲ. ಸವದಿ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಡವಿದ್ದರೆ ಅದರ ಬಗ್ಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಬೇಕು, ನಾನಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT