ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ವೈರಾಣು ಜ್ವರಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

Published : 24 ನವೆಂಬರ್ 2023, 15:47 IST
Last Updated : 24 ನವೆಂಬರ್ 2023, 15:47 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದಲ್ಲಿ ಡೆಂಗಿ, ಚಿಕೂನ್‌ ಗುನ್ಯ, ಮಲೇರಿಯಾ ಸೇರಿದಂತೆ ವೈರಾಣು ಜ್ವರಬಾಧೆ ಪ್ರಕರಣಗಳು ಏರಿಕೆಯಾಗಿವೆ.

ಚಿಕಿತ್ಸೆ ಪಡೆಯಲು ಆಸ್ಪತ್ರೆಯತ್ತ ಬರುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಗಿದೆ.

ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರಬಾಧೆ ತೀವ್ರವಾಗಿದೆ. ಜ್ವರ, ಕೆಮ್ಮು–ನೆಗಡಿ, ಮೈಕೈ ನೋವು, ಬಾಯಿಯಲ್ಲಿ ಅಲ್ಸರ್‌ ಸಮಸ್ಯೆಯಿಂದ ಬಳಲುತ್ತಿರುವವರು ಚಿಕಿತ್ಸೆಗೆ ಆಸ್ಪತ್ರೆಯತ್ತ ಬರುತ್ತಿದ್ದಾರೆ. ಚಿಕೂನ್‌ ಗುನ್ಯ ರೋಗ ಲಕ್ಷಣಗಳಾದ ತಲೆಸಿಡಿತ, ಮಂಡಿ ಹಾಗೂ ಮೊಣಕೈ ನೋವು, ಮುಂಗೈ ನೋವಿನಿಂದ ಬಳಲುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. 

ನಗರ ಹಾಗೂ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಚಳಿಗಾಲ ಶುರುವಾಗುತ್ತಿರುವುದು ಹಾಗೂ ಕವಿದ ಮೋಡದಿಂದಾಗಿ ತಂಪನೆಯ ಹವಾಮಾನವು ವೈರಾಣು ಜ್ವರಕ್ಕೆ ಪೂರಕವಾಗಿದೆ ಎಂದು ವೈದ್ಯರು ಹೇಳುತ್ತಾರೆ.

ರಾಜ್ಯದಲ್ಲಿ ನ.24ರವರೆಗೆ 14,116 ಡೆಂಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿಯೇ 7,256 ಪ್ರಕರಣಗಳು ಪತ್ತೆಯಾಗಿವೆ. ಅಕ್ಟೋಬರ್ 31ರವರೆಗೆ 12,536 ಡೆಂಗಿ ಪ್ರಕರಣಗಳು ವರದಿಯಾಗಿದ್ದವು. 25 ದಿನಗಳಲ್ಲಿ 1,580 ಡೆಂಗಿ ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಕಳೆದ ಒಂದು ವಾರದಿಂದ ಸರಾಸರಿ 100ರಿಂದ 200 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೂ 50,621 ಮಂದಿಗೆ ಡೆಂಗಿ ತಪಾಸಣೆ ನಡೆಸಲಾಗಿತ್ತು. ಅದರಲ್ಲಿ 31,621 ಡೆಂಗಿ ಶಂಕಿತರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ.

ತುಮಕೂರು, ಶಿವಮೊಗ್ಗ, ವಿಜಯಪುರ, ಕಲಬುರಗಿ, ಮೈಸೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಡೆಂಗಿ ಪ್ರಕರಣಗಳು ವರದಿಯಾಗುತ್ತಿವೆ.

ರಾಜ್ಯದಲ್ಲಿ ನ.24ರ ವರೆಗೆ 1,410 ಚಿಕೂನ್‌ ಗುನ್ಯ ಪ್ರಕರಣಗಳು ವರದಿಯಾಗಿವೆ. ಅಕ್ಟೋಬರ್‌ 31ರ ವರೆಗೆ 1,274 ಚಿಕೂನ್‌ ಗುನ್ಯ ಪ್ರಕರಣಗಳ ವರದಿಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT