ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ: ರಾಜ್ಯದಲ್ಲಿ 293 ಪ್ರಕರಣ ದೃಢ

Published 10 ಜುಲೈ 2024, 23:38 IST
Last Updated 10 ಜುಲೈ 2024, 23:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ 293 ಡೆಂಗಿ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಡೆಂಗಿ ಪತ್ತೆ ಸಂಬಂಧ 24 ಗಂಟೆಗಳ ಅವಧಿಯಲ್ಲಿ 1,874 ಪರೀಕ್ಷೆಗಳನ್ನು ನಡೆಸಲಾಗಿತ್ತು. ಹೊಸದಾಗಿ ಡೆಂಗಿ ಪೀಡಿತರಾದವರಲ್ಲಿ ಒಂದು ವರ್ಷದೊಳಗಿನ ಎರಡು ಶಿಶುಗಳು, 18 ವರ್ಷದೊಳಗಿನ 101 ಮಂದಿ ಹಾಗೂ 18 ವರ್ಷ ದಾಟಿದ 193 ಮಂದಿ ಸೇರಿದ್ದಾರೆ. 

ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 358 ಡೆಂಗಿ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗಿ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 118 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 2,292ಕ್ಕೆ ತಲುಪಿದೆ. ಡೆಂಗಿ ಪೀಡಿತರಲ್ಲಿ ಸದ್ಯ 135 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿವರೆಗೆ ಏಳು ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT