ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Dengue Fever | ಈ ವರ್ಷ ಗರಿಷ್ಠ ಪ್ರಕರಣ, 25 ಸಾವಿರಕ್ಕೂ ಅಧಿಕ ಪ್ರಕರಣ ದಾಖಲು

25 ಸಾವಿರದ ಗಡಿ ದಾಟಿದ ಡೆಂಗಿ ಜ್ವರ ಪೀಡಿತರ ಒಟ್ಟು ಸಂಖ್ಯೆ
Published : 4 ಸೆಪ್ಟೆಂಬರ್ 2024, 15:24 IST
Last Updated : 4 ಸೆಪ್ಟೆಂಬರ್ 2024, 15:24 IST
ಫಾಲೋ ಮಾಡಿ
Comments

ಬೆಂಗಳೂರು: ಡೆಂಗಿ ಜ್ವರವು ರಾಜ್ಯದಲ್ಲಿ ಈ ವರ್ಷ ಅಧಿಕ ಮಂದಿಯನ್ನು ಕಾಡಿದ್ದು, ಇದೇ ಮೊದಲ ಬಾರಿಗೆ ಒಟ್ಟು ಪ್ರಕರಣಗಳ ಸಂಖ್ಯೆ 25 ಸಾವಿರದ ಗಡಿ ದಾಟಿದೆ.

ಡೆಂಗಿ ಪೀಡಿತರಲ್ಲಿ ಈವರೆಗೆ 12 ಮಂದಿ ಮೃತಪಟ್ಟಿದ್ದಾರೆ. 2017ರಲ್ಲಿ 17,844 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದವು. 2020ರಲ್ಲಿ ಪ್ರಕರಣಗಳ ಸಂಖ್ಯೆ 3,823ಕ್ಕೆ ಇಳಿಕೆಯಾಗಿತ್ತು. ಮುಂದಿನ ವರ್ಷಗಳಲ್ಲಿ ಪ್ರಕರಣಗಳು ಏರಿಕೆ ಪಡೆದಿವೆ. ಕಳೆದ ವರ್ಷ 16,539 ಪ್ರಕರಣಗಳು ಖಚಿತ ಪಟ್ಟಿದ್ದವು. ಈ ವರ್ಷ ಈಗಾಗಲೇ ಪ್ರಕರಣಗಳ ಸಂಖ್ಯೆ 25,802ಕ್ಕೆ ಏರಿಕೆಯಾಗಿದೆ.

ಕಳೆದ 45 ದಿನಗಳಲ್ಲಿ 15 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಸದ್ಯ ರಾಜ್ಯದಲ್ಲಿ 1,526 ಸಕ್ರಿಯ ಡೆಂಗಿ ಪ್ರಕರಣಗಳಿವೆ. 1,333 ಮಂದಿ ಮನೆ ಆರೈಕೆಗೆ ಒಳಗಾದರೆ, 193 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಡೆಂಗಿ ಪತ್ತೆಗೆ ಸಂಬಂಧಿಸಿದಂತೆ ಈವರೆಗೆ 1.81 ಲಕ್ಷ ಜನರ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ದೃಢ ಪ್ರಕರಣಗಳಲ್ಲಿ 526 ಮಂದಿ ಒಂದು ವರ್ಷದೊಳಗಿನವರಾದರೆ, 9,193 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 16,083 ಮಂದಿ 18 ವರ್ಷಗಳು ಮೇಲ್ಪಟ್ಟವರಾಗಿದ್ದಾರೆ.

ಈ ವರ್ಷ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗರಿಷ್ಠ (11,767) ಪ್ರಕರಣಗಳು ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT