ಮೈಸೂರು: ‘ಎಚ್.ಡಿ. ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗಂಗೇನಹಳ್ಳಿಯಲ್ಲಿ ಬಹುಕೋಟಿ ಮೌಲ್ಯದ 1 ಎಕರೆ 11 ಗುಂಟೆ ಜಮೀನು ಡಿನೋಟಿಫಿಕೇಷನ್ ಆಗಿರುವುದು ಬಹಳ ಗಂಭೀರ ಪ್ರಕರಣ’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

‘ಜಮೀನನ್ನು ಈಗಾಗಲೇ ಸ್ವಾಧೀನಕ್ಕೆ ಪಡೆದುಕೊಳ್ಳಲಾಗಿದ್ದು, ಅವಕಾಶವಿಲ್ಲವೆಂದು ಅಧಿಕಾರಿಗಳು ಹೇಳಿದ್ದರೂ ಡಿನೋಟಿಫೈ ಮಾಡಿಸಿದ್ದಾರೆ. ಸತ್ತವರ ಹೆಸರಿಗೇ ಮಾಡಿಸಿದ್ದಾರೆ. ಜಮೀನು ಕುಮಾರಸ್ವಾಮಿ ಭಾಮೈದನಿಗೆ ನೋಂದಣಿಯಾಗಿದೆ. ಅವರ ಅತ್ತೆ ಜಿಪಿಎ ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ನೋಡಿ, ಮಾಹಿತಿ ಪಡೆದು ಪ್ರತಿಕ್ರಿಯಿಸುವೆ’ ಎಂದರು.

‘ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರು ಯಾವತ್ತೂ ಯಾವುದನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ. ಕೇಂದ್ರ ಸಚಿವರಾಗಿ ಸತ್ಯವೋ, ಇಲ್ಲವೋ ಎಂಬುದನ್ನು ತಿಳಿದುಕೊಂಡು ಮಾತನಾಡಬೇಕಲ್ಲವೇ?’ ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.