ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ’ ಎಂಬ ತಮ್ಮ ಪುಸ್ತಕದಲ್ಲಿ ಲೇಖಕ ಕೆ.ಎಸ್.ಭಗವಾನ್ ‘ಶ್ರೀರಾಮನನ್ನು ಹೀಯಾಳಿಸಿದ್ದಾರೆ, ಅವಹೇಳನಕಾರಿ ಪದಗಳ ಬಳಕೆ ಮಾಡಿದ್ದಾರೆ. ಈ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಕೀಲೆ ಮೀರಾ ರಾಘವೇಂದ್ರ ಅವರು ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ಸಂಬಂಧ ಮೀರಾ ರಾಘವೇಂದ್ರ ಅವರು, ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 37ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ ಎಂ.ಸೈಯದ್ ಅರಾಫತ್ ಇಬ್ರಾಹಿಂ ಅವರು ಸೋಮವಾರ ಭಗವಾನ್ ಅವರನ್ನು ಖುಲಾಸೆಗೊಳಿಸಿ ಆದೇಶಿಸಿದ್ದಾರೆ.

ಇಂತಹುದೇ ಮತ್ತೊಂದು ಪ್ರಕರಣದಲ್ಲಿ ನ್ಯಾಯಾಲಯ ಇತ್ತೀಚೆಗೆಷ್ಟೇ ಕೆ.ಎಸ್.ಭಗವಾನ್ ಅವರನ್ನು ಖುಲಾಸೆಗೊಳಿಸಿತ್ತು. ಎರಡೂ ಪ್ರಕರಣಗಳಲ್ಲಿ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಅವರು ಭಗವಾನ್ ಪರ ವಾದ ಮಂಡಿಸಿದ್ದರು.

ದುರ್ನಡತೆ: ‘ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿಯುವ ಮೂಲಕ ವಕೀಲೆ ಮೀರಾ ರಾಘವೇಂದ್ರ ಅವರು ವೃತ್ತಿ ದುರ್ನಡತೆ ತೋರಿದ್ದು, ವಕೀಲರ ಶಿಷ್ಟಾಚಾರಗಳಿಗೆ ಅವಮಾನ ಉಂಟು ಮಾಡಿದ್ದಾರೆ. ಈ ಕಾರಣಕ್ಕಾಗಿ ಅವರು ಮೂರು ತಿಂಗಳ ಕಾಲ ದೇಶದ ಯಾವುದೇ ಕೋರ್ಟ್ಗಳಲ್ಲಿ ವಕೀಲಿಕೆ ನಡೆಸಬಾರದು’ ಎಂದು ರಾಜ್ಯ ವಕೀಲರ ಪರಿಷತ್ ಇತ್ತೀಚೆಗಷ್ಟೇ ಆದೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

‘ಭಗವಾನ್ ವಿಚಾರಣೆಗೆ ಹಾಜರಾಗಿದ್ದ ಸಮಯದಲ್ಲಿ ಕೋರ್ಟ್ ಆವರಣದಲ್ಲಿ ತಮ್ಮ ಮುಖಕ್ಕೆ ಮೀರಾ ಮಸಿ ಬಳಿದಿದ್ದಾರೆ’ ಎಂಬ ಆರೋಪದಡಿ ಕೆ.ಎಸ್.ಭಗವಾನ್ ದಾಖಲಿಸಿದ್ದ ದೂರನ್ನು ರಾಜ್ಯ ವಕೀಲರ ಪರಿಷತ್ತಿನ, ‘ಶಿಸ್ತುಪಾಲನಾ ಸಮಿತಿ’ ಅಧ್ಯಕ್ಷ ಎಸ್.ಮಹೇಶ್ ಮತ್ತು ಪರಿಷತ್ ಸದಸ್ಯ ಎಸ್.ಹರೀಶ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.