ದೇವನಹಳ್ಳಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳಲ್ಲಿ ಮೂರು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವು ಸಾಧಿಸಿದ್ದು, 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಎಲ್.ಎನ್.ಅಂಬರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಪಂಚರಾಜ್ಯಗಳ ಫಲಿತಾಂಶವು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದರು.

ಪಂಚರಾಜ್ಯ ಚುನಾವಣೆ ಫಲಿತಾಂಶ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ತಂದಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಸ್ಥಳೀಯ ಮಟ್ಟದಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ. 2028ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸುವುದು ನಮ್ಮ ಗುರಿ ಎಂದು ಹೇಳಿದರು.

ಮಾಜಿ ಶಾಸಕ ಜಿ. ಚಂದ್ರಣ್ಣ, ಪಂಚರಾಜ್ಯಗಳ ಫಲಿತಾಂಶದ ನಂತರ ಅನ್ಯಪಕ್ಷದವರಲ್ಲೂ ಬಿಜೆಪಿ ಪರ ಚರ್ಚೆ ಕೇಳಿ ಬರುತ್ತಿರುವುದು ಗಮನಾರ್ಹ ಬೆಳವಣಿಗೆ. ಇದು ಪಕ್ಷದ ವಿಸ್ತರಣೆ ಮತ್ತು ಜನಬೆಂಬಲ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ರಾಮಕೃಷ್ಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗ ವೇಣಿ, ಬಯಪ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣ್, ದೇಸುನಾಗರಾಜ್, ಬುಳ್ಳಳ್ಳಿ ರಾಜಪ್ಪ, ನಾರಾಯಣಸ್ವಾಮಿ, ಪ್ರಭು, ತಮ್ಮಯ್ಯ, ಅನಿಲ್, ಕದಿರಪ್ಪ, ಅಮರ್ನಾರಾಯಣ್, ವೆಂಕಟೇಶ್, ತಾಯಮ್ಮ, ಪ್ರೇಮ, ಪ್ರಭಾಕರ್, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-15-1358059855

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.