ಬೆಂಗಳೂರು: ‘ದೇವನಹಳ್ಳಿ ಸುತ್ತಮುತ್ತ ಯಾವ–ಯಾವ ಬಿಲ್ಡರ್ಗಳು ಎಷ್ಟೆಷ್ಟು ಭೂಮಿ ಖರೀದಿಸಿದ್ದಾರೆ, ಯಾರ ಜೊತೆ ಅವರು ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರೈತರ ಹೆಸರಿನಲ್ಲಿನ ಹೋರಾಟದ ಹಿಂದೆ ಯಾರ ಕುಮ್ಮಕ್ಕು ಇದೆ ಎಂಬುದೂ ನಮಗೆ ಗೊತ್ತಿದೆ. ಸರ್ಕಾರವು ನಿಜವಾದ ರೈತರ ದನಿಗೆ ಬೆಲೆ ಕೊಡುತ್ತದೆಯೇ ವಿನಾ, ರೈತರ ಹೆಸರಿನಲ್ಲಿ ಏನೇನೋ ಮಾತನಾಡುತ್ತಿರುವವರಿಗಲ್ಲ’ ಎಂದರು.

‘ಅಲ್ಲಿ ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ ₹3.5 ಕೋಟಿ ಪರಿಹಾರ ಕೇಳುತ್ತಿದ್ದಾರೆ. ರೈತರಲ್ಲೇ ಈ ಬಗ್ಗೆ ಬೇರೆ ಬೇರೆ ಅಭಿಪ್ರಾಯಗಳಿವೆ. ಸರ್ಕಾರವು ಎಲ್ಲ ರೀತಿಯ ಪರಿಹಾರಗಳ ಸಾಧಕ– ಬಾಧಕಗಳನ್ನೂ ಪರಿಶೀಲಿಸುತ್ತಿದೆ’ ಎಂದು ಮಾಹಿತಿ ನೀಡಿದರು.

‘ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ ಹೆಸರಿನಲ್ಲಿ ಕೆಲವು ರೈತರು ಶನಿವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, 449 ಎಕರೆಯನ್ನು ಸರ್ಕಾರಕ್ಕೆ ಕೊಡುವುದಾಗಿ ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಮೊದಲು ಅಧಿಸೂಚನೆ ಹೊರಡಿಸಿದ್ದು ಇಷ್ಟೇ ಭೂಮಿಗೆ’ ಎಂದರು.

‘ಭೂಸ್ವಾಧೀನ ಬೇಡವೆಂದು ಕೆಲವು ಸಾಹಿತಿಗಳು, ಚಿಂತಕರು ನಮ್ಮ ಪಕ್ಷದ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಅದನ್ನು ನಾನು ವಿರೋಧಿಸುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹೋರಾಡುವ ಹಕ್ಕಿದೆ. ನಾವು ಎಲ್ಲ ಸಾಧ್ಯತೆಗಳನ್ನೂ ಪರಿಶೀಲಿಸುತ್ತಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ’ ಎಂದು ವಿವರಿಸಿದರು.

ಶಾಶ್ವತ ಕೃಷಿ ವಲಯ?

‘ದೇವನಹಳ್ಳಿ ಸುತ್ತಲಿನ ಪರಿಸರದಲ್ಲಿ ಕೃಷಿ ಉಳಿಯಬೇಕು ಎನ್ನುವ ಕೂಗು ಎದ್ದಿದೆ. ಆ ಪರಿಸರವನ್ನು ಶಾಶ್ವತ ಕೃಷಿ ವಲಯ ಎಂದು ಘೋಷಿಸುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ’ ಎಂದು ಎಂ.ಬಿ.ಪಾಟೀಲ ಹೇಳಿದರು. ‘ರಕ್ಷಣಾ ಮತ್ತು ವೈಮಾನಿಕ ಪಾರ್ಕ್ ಸ್ಥಾಪನೆಯೂ ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಮಹತ್ವದ್ದಾಗಿದೆ. ಕೃಷಿ ಮತ್ತು ಕೈಗಾರಿಕೆ ಒಟ್ಟೊಟ್ಟಿಗೇ ಸಾಗಬೇಕು ಎಂಬುದು ನನ್ನ ಕಳಕಳಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ (ಜುಲೈ 15) ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದರು.

1777 ಎಕರೆ ಭೂಸ್ವಾಧೀನ ಕೈಬಿಡಲು ಒತ್ತಾಯ

ಧಾರವಾಡ: ‘ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ (ಸಿಎಫ್ಡಿ) ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ‘ಭೂಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಸಿಎಫ್ಡಿ ಹಾಗೂ ಇತರೆ ಸಮಾನ ಮನಸ್ಕ ಸಂಘಟನೆಗಳು ಬೆಂಬಲ ನೀಡುತ್ತವೆ’ ಎಂದು ಹೇಳಿದರು. ‘ಕಾನೂನಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಿ ಜುಲೈ 15ರಂದು ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು ವಚನ ನೀಡಿದಂತೆ ಅವರು ನಡೆದುಕೊಳ್ಳುತ್ತಾರೆಂಬ ನಂಬಿಕೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.