ಬೆಂಗಳೂರು: 2025–26ನೇ ಸಾಲಿನ ‘ಡಿ.ದೇವರಾಜು ಅರಸು ಪ್ರಶಸ್ತಿ’ಗೆ ಪತ್ರಕರ್ತ ಕಲ್ಲೆ ಶಿವೋತ್ತಮರಾವ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

‘ಸಾಮಾಜಿಕ ನ್ಯಾಯದ ಪರವಾಗಿ ಅವರು ನಡೆಸಿದ ಹೋರಾಟ, ದೇವರಾಜು ಅರಸು ಅವರ ತತ್ವ–ಸಿದ್ಧಾಂತಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಅವರ ಶ್ರಮ ಮತ್ತು ಪತ್ರಕರ್ತರಾಗಿ ನೀಡಿದ ಕೊಡುಗೆಯಿಂದಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಶಸ್ತಿಯು ₹5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ವಿಧಾನಸೌಧದಲ್ಲಿ ಇದೇ ಆ.20ರಂದು ಬೆಳಿಗ್ಗೆ 10.45ಕ್ಕೆ ನಡೆಯುವ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದವರಾದ 95ರ ವಯೋಮಾನದಲ್ಲಿರುವ ಕಲ್ಲೆ ಶಿವೋತ್ತಮರಾವ್ ಅವರು ತಮ್ಮ 14ನೇ ವಯಸ್ಸಿನಲ್ಲಿಯೇ ಮಂಗಳೂರಿನ ನವಭಾರತ ದೈನಿಕದ ವರದಿಗಾರರಾಗಿ ಕೆಲಸ ಆರಂಭಿಸಿದ್ದರು. ರಾಷ್ಟ್ರಬಂಧು, ರಾಷ್ಟ್ರಮತ, ತಾಯಿನಾಡು, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ಕನ್ನಡ ಪ್ರಭ, ಕಂಠೀರವ ಪತ್ರಿಕೆಗಳಲ್ಲಿ ವರದಿಗಾರರಾಗಿ, ಜನಪ್ರಗತಿಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.

‘ಜಯಪ್ರಕಾಶ ನಾರಾಯಣ, ರಾಮ ಮನೋಹರ ಲೋಹಿಯಾ ಮತ್ತು ಪೆರಿಯಾರ್ ಚಳವಳಿಗಳ ಪ್ರತಿಪಾದನೆಗಳ ಅನುಯಾಯಿಯಾಗಿದ್ದ ಶಿವೋತ್ತಮರಾವ್ ಅವರು, ಹಾವನೂರ ಆಯೋಗ ರಚನೆಗೂ ಮುನ್ನವೇ ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸಿದ್ದರು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಪತ್ರಿಕೆಗಳ ಸಂಪಾದಕರಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಯುವಕರಿಗೆ ವರದಿಗಾರಿಕೆಯ ಅವಕಾಶಗಳನ್ನು ನೀಡಿದ್ದರು. ಸಂವಿಧಾನದ ಆಶಯ, ಸಾಮಾಜಿಕ ನ್ಯಾಯ, ಮೀಸಲಾತಿ, ದಲಿತ ಮತ್ತು ಹಿಂದುಳಿದವರ ಸಬಲೀಕರಣದ ಪರವಾಗಿ ದನಿಯೆತ್ತುವ ಸಂದರ್ಭಗಳು ಒದಗಿ ಬಂದಾಗಲೆಲ್ಲಾ, ಅವುಗಳ ಪರವಾಗಿ ನಿಂತರು’ ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.