ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಆರೋಪದಡಿ ಹೈಕೋರ್ಟ್ ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ಪೊಲೀಸರು, ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.

‘ನನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಜಿ.ದೇವರಾಜೇಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದೇವರಾಜೇಗೌಡ ಪರ ಹಾಜರಿದ್ದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಶಶಿಧರ ಬೆಳಗುಂಬ ಅವರು, ‘ಅರ್ಜಿದಾರರ ವಿರುದ್ಧ ಪೊಲೀಸರು ಬಲವಂತದ ಕ್ರಮ ಕೈಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ವಿನಾಕಾರಣ ಅವರಿಗೆ ನೋಟಿಸ್ ನೀಡಿ ಕಿರುಕುಳ ನೀಡಲಾಗುತ್ತಿದೆ’ ಎಂದು ಆಕ್ಷೇಪಿಸಿದರು.

ಇದಕ್ಕೆ ನ್ಯಾಯಪೀಠ, ‘ಯಾವ ಕೇಸಿದು’ ಎಂದು ಪ್ರಶ್ನಿಸಿದರು. ಶಶಿಧರ ಬೆಳಗುಂಬ, ‘ಅರ್ಜಿದಾರರು ಹೈಕೋರ್ಟ್ ವಕೀಲರು. ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿದ ಆರೋಪದಡಿ ಅವರ ವಿರುದ್ಧ ಈ ಕೇಸು ದಾಖಲಿಸಲಾಗಿದೆ’ ಎಂದರು. ಇದಕ್ಕೆ ರಾಜ್ಯ ಪ್ರಾಸಿಕ್ಯೂಷನ್ ಪರ ಹಾಜರಿದ್ದ ಬಿ.ಎನ್.ಜಗದೀಶ್, ‘ಅರ್ಜಿದಾರರ ವಿರುದ್ಧ ಇದೊಂದೇ ಅಲ್ಲ. ಹಲವು ಪ್ರಕರಣಗಳಿವೆ’ ಎಂದರು.

ಇದನ್ನು ಆಲಿಸಿದ ನ್ಯಾಯಪೀಠ,‘ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಕರಣವೇನು?: ‘ಜಿ.ದೇವರಾಜೇಗೌಡ ಅವರು ನನ್ನ ಅನುಮತಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನನ್ನನ್ನು ನಿಂದಿಸಿರುತ್ತಾರೆ. ಈ ಮೂಲಕ ಸಾರ್ವಜನಿಕರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುತ್ತಾರೆ’ ಎಂದು ಆರೋಪಿಸಿ ಸತ್ಯಭಾಮ ಅವರು ಹಾಸನ ನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 19ರಂದು ದೂರು ದಾಖಲಿಸಿದ್ದರು.

‘ಚನ್ನರಾಯಪಟ್ಟಣ ಆದ್ಯಾಸ್ ಬಾರ್ ಅಂಡ್ ರೆಸ್ಟೊರೆಂಟ್ ಕಳೆದ ಆರು ತಿಂಗಳಿನಿಂದ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಬಕಾರಿ ಇಲಾಖೆ ಆಯುಕ್ತರು ತನಿಖೆ ನಡೆಸಿ ನಿಯಮ ಉಲ್ಲಂಘಿಸಿರುವುದು ದೃಢಪಟ್ಟಿದ್ದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗಿರುತ್ತದೆ. ಆದರೆ, ಜಿಲ್ಲಾಧಿಕಾರಿ ಸತ್ಯಭಾಮ, ಬಾರ್ ಅಂಡ್ ರೆಸ್ಟೊರೆಂಟ್ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ, ಕಡತಗಳನ್ನು ತಮ್ಮ ಬಳಿಯೇ ಇರಿಸಿಕೊಂಡು ಅವ್ಯವಹಾರಗಳನ್ನು ಮಾಡುತ್ತಿರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೇವರಾಜೇಗೌಡ ಅವರು 15ರ ಮಾರ್ಚ್ 2024ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿರುತ್ತಾರೆ’ ಎಂದು ಸತ್ಯಭಾಮ ತಮ್ಮ ದೂರಿನಲ್ಲಿ ವಿವರಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಭಾರತೀಯ ದಂಡ ಸಂಹಿತೆ–1860ರ ಕಲಂ (ಐಪಿಸಿ) 353ರ ಅಡಿಯಲ್ಲಿ ದೇವರಾಜೇಗೌಡ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.