ಬೆಂಗಳೂರು: ‘ಕರ್ನಾಟಕದಲ್ಲಿ 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಬಿಜೆಪಿ ಜತೆಗಿನ ಮೈತ್ರಿ ಮುಂದುವರಿಯಲಿದೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ತಮ್ಮ ಮನೆಯಲ್ಲಿ ಸೋಮವಾರ ಜನ್ಮ ದಿನ ಆಚರಿಸಿಕೊಂಡ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಉತ್ತಮ ಸಂಬಂಧವಿದೆ. ಮೈತ್ರಿ ಪಕ್ಷಗಳ ನಡುವೆ ಸಣ್ಣಪುಟ್ಟ ವ್ಯತ್ಯಾಸಗಳಾದರೂ ಕುಳಿತು ಪರಸ್ಪರ ಚರ್ಚಿಸುತ್ತೇವೆ. ಎನ್ಡಿಎದಲ್ಲಿ ಜೆಡಿಎಸ್ ಪಕ್ಷ ಸಣ್ಣ ಪಾಲುದಾರ. ಎಂತಹ ಸಮಸ್ಯೆಗಳಿದ್ದರೂ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ’ ಎಂದರು.

‘93 ವರ್ಷ ಪೂರೈಸಿದೆ ಎಂದು ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಜನರ ಪರ ಹೋರಾಟ ಮುಂದುವರಿಸುತ್ತೇನೆ. ವೀಲ್ಚೇರ್ನಲ್ಲಾದರೂ ರಾಜ್ಯದಾದ್ಯಂತ ಸಂಚರಿಸುತ್ತೇನೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಿಗೆ ಸೀಮಿತವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಕ್ತಿ ಇನ್ನಷ್ಟು ಕುಂದಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.