ನವದೆಹಲಿ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿ ನಾಲ್ವರು ರಾಜ್ಯಸಭಾ ಸದಸ್ಯರ ಅವಧಿ ಜೂನ್ನಲ್ಲಿ ಮುಗಿಯಲಿದೆ. 93ರ ಹರೆಯದ ದೇವೇಗೌಡರು ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಕಾತರರಾಗಿದ್ದಾರೆ. ಆದರೆ, ಜೆಡಿಎಸ್ಗೆ ಸಂಖ್ಯಾಬಲ ಇಲ್ಲ. ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದ್ದು, ಇನ್ನೊಂದು ಸ್ಥಾನ ಗೆಲ್ಲುವಷ್ಟು ಸಂಖ್ಯಾಬಲವನ್ನು ಬಿಜೆಪಿ ಹೊಂದಿದೆ. ಈ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡುವುದಕ್ಕೆ ಬಿಜೆಪಿ ರಾಜ್ಯ ಘಟಕದ ತೀವ್ರ ವಿರೋಧ ಇದೆ.

ಈ ಕಾರಣದಿಂದಾಗಿ, ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮನವೊಲಿಸುವ ಕಸರತ್ತು ನಡೆಸಿದರು. ಜೆಡಿಎಸ್–ಬಿಜೆಪಿ ಸಮನ್ವಯ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಾಗೂ ರಾಜ್ಯಸಭಾ ಚುನಾವಣೆಯ ಮೈತ್ರಿ ಕಾರ್ಯತಂತ್ರದ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.