ಬೆಂಗಳೂರು: ‘ರಾಜ್ಯಸಭೆಗೆ ಎಚ್.ಡಿ. ದೇವೇಗೌಡ ಅವರನ್ನು ಆಯ್ಕೆ ಮಾಡಲು ನಮ್ಮ ವಿರೋಧ ಇಲ್ಲ. ಆದರೆ, ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೇವೇಗೌಡ ಅವರಂತಹ ನಾಯಕರು ರಾಜ್ಯಸಭೆಗೆ ಹೋಗುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಎನ್ಡಿಎ ವತಿಯಿಂದ ಅವರನ್ನು ಆಯ್ಕೆ ಮಾಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಜೆಡಿಎಸ್ ನಾಯಕರೂ ಈ ಬಗ್ಗೆ ನಮ್ಮೊಂದಿಗೆ ಮಾತನಾಡಿಲ್ಲ’ ಎಂದರು.

‘ರಾಜ್ಯಸಭೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಲ್ಲಿ ದೇವೇಗೌಡ ಅವರು ಜತೆಯಾಗಿ ನಿಂತಿದ್ದಾರೆ. ಅವರು ರಾಜ್ಯಸಭೆಗೆ ಆಯ್ಕೆಯಾದರೆ ಒಳ್ಳೆಯದೆ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ’ ಎಂದು ಹೇಳಿದರು.

ಬಿಜೆಪಿಯಿಂದ ಡಿ.ವಿ. ಸದಾನಂದಗೌಡ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆಯಾಗಿದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ಈ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ. ರಾಜ್ಯಸಭೆ ಅಭ್ಯರ್ಥಿ ಆಯ್ಕೆ ವಿಚಾರವು ಪಕ್ಷದ ವರಿಷ್ಠರಿಗೆ ಬಿಟ್ಟದ್ದು’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.