ವಿಜಯಪುರ: ‘ನಮ್ಮದು ಅಭಿವೃದ್ಧಿ ಪರ ಸರ್ಕಾರ. ನಮ್ಮ ಸರ್ಕಾರದ ಎರಡು ವರ್ಷಗಳ ಸಾಧನೆ ಮತ್ತು ಹಿಂದಿನ ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಸಾಧನೆ ಕುರಿತು ಸಾರ್ವಜನಿಕವಾಗಿ ದಾಖಲೆ ಸಹಿತ ಚರ್ಚಿಸೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಪಂಥಾಹ್ವಾನ ನೀಡಿದರು.

ಇಂಡಿ ಪಟ್ಟಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪಟ್ಟಣದಲ್ಲಿ ₹4,557 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಲೋಕಾರ್ಪಣೆ ಮಾಡಿರುವುದನ್ನು ವಿರೋಧ ಪಕ್ಷದವರು ಬಂದು ನೋಡಲಿ’ ಎಂದರು.

‘ರಾಜ್ಯ ಸರ್ಕಾರದ ಬಳಿ ಹಣ ಇಲ್ಲ. ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಬಿಜೆಪಿ-ಜೆಡಿಎಸ್ನವರು ಅಪಪ್ರಚಾರ ಮಾಡುತ್ತಾರೆ. ಅವರಿಗೆ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರಿಸುತ್ತೇವೆ’ ಎಂದರು.

‘ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ಸಿಗುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ’ ಎಂದೂ ಪ್ರಶ್ನಿಸಿದರು.

‘ಇಂಡಿಯಲ್ಲಿ ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಆಗ ನಾನು ಇಲ್ಲಿಗೆ ಬಂದು ಭರವಸೆ ನೀಡಿದಂತೆ ಲಿಂಬೆ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ್ದೇನೆ. ಈಗ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ನ ಪರಂಪರೆ ಮುಂದುವರಿಸಿದ್ದೇನೆ’ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ ₹55 ಸಾವಿರ ಕೋಟಿ ಮತ್ತು ₹83 ಸಾವಿರ ಕೋಟಿ ಹಣ ಇತರೆ ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿರಿಸಿದ್ದೇವೆ. ಅಭಿವೃದ್ಧಿಪರ ಆಡಳಿತ ನೀಡುತ್ತಿದ್ದೇವೆ
ಸಿದ್ದರಾಮಯ್ಯ ಮುಖ್ಯಮಂತ್ರಿ

ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ: ಡಿಕೆಶಿ

‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ದೊಡ್ಡ ಮಾದರಿಯಾಗಿವೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಮ್ಮ ರಾಜ್ಯದ ಮಾದರಿ ಅನುಸರಿಸಲಾಗುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ಜನರ ಆದಾಯ ಪಾತಾಳಕ್ಕೆ ಕುಸಿದು ಬೆಲೆ ಏರುತ್ತಿರುವ ವೇಳೆ ಬಡವರ ರಕ್ಷಣೆಗೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಈ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹5 ಸಾವಿರ ಉಳಿಯಲಿದೆ. ಇಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಹೊರತಾಗಿ ಬೇರೆ ಯಾರೂ ನೀಡಲು ಸಾಧ್ಯವಿಲ್ಲ’ ಎಂದರು. ‘ಕಾಂಗ್ರೆಸ್ 70 ವರ್ಷ ಈ ದೇಶವನ್ನು ಆಳಿದೆ. ನಮ್ಮ ಪಕ್ಷ ನೀಡಿದ ಯೋಜನೆಗಳನ್ನು ಯಾರೂ ಬದಲಿಸಲು ಆಗದು. ಯಾರಿಂದಲೂ ನಿಲ್ಲಿಸಲು ಆಗಲಿಲ್ಲ. ಅಂತೆಯೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬದಲಿಸಲು ಸಾಧ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.