ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಯೋಜನೆ’ ಜಾರಿಗೆ ಸಂಪುಟ ಅಸ್ತು

Last Updated 12 ಆಗಸ್ಟ್ 2022, 11:23 IST
ಅಕ್ಷರ ಗಾತ್ರ

ಬೆಂಗಳೂರು:ಡಾ.ಡಿ.ಎಂ.ನಂಜುಂಡಪ್ಪ ಸಮಿತಿ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನ ನಿವಾರಿಸಲು ಜಾರಿಯಲ್ಲಿರು ವಿಶೇಷ ಅಭಿವೃದ್ಧಿ ಯೋಜನೆಯ ಕಾಲಾವಧಿ ಮುಗಿದಿರುವುದರಿಂದ ಹೊಸ ‘ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಯೋಜನೆ’ಯನ್ನು ನೀತಿ ಆಯೋಗ ಸೂಚಿಸಿರುವ 49 ಸೂಚಕಗಳನ್ನು ಅಳವಡಿಸಿ ಜಾರಿ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ವಿವಿಧ ಅಭಿವೃದ್ಧಿ ಸೂಚಕಗಳಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಸಾಧನೆ ಮಾಡುತ್ತಿರುವ ತಾಲ್ಲೂಕುಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳೆಂದು ಗುರುತಿಸಿ ಈ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ವಿವಿಧ ಇಲಾಖೆಗಳ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆಯನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ನೀಡಲಾಗುವುದು. ಇದರ ಅನ್ವಯ 93 ತಾಲ್ಲೂಕುಗಳಲ್ಲಿ ಶಿಕ್ಷಣ ಗುಣಮಟ್ಟ ವೃದ್ಧಿಸಲು, 100 ತಾಲ್ಲೂಕುಗಳಲ್ಲಿ ಆರೋಗ್ಯ ಸೇವೆಯನ್ನು ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಿಸಲು ಒಟ್ಟಾರೆ ₹3,000 ಕೋಟಿ ವೆಚ್ಚದಲ್ಲಿ ಫಲಿತಾಂಶ ಕೇಂದ್ರಿತ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT