ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಭಾರ’ ಡಿಜಿ– ಐಜಿಪಿ ಇನ್ನೂ ಕಾಯಂ

ರಾಜ್ಯದ 42ನೇ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್
Published 6 ಆಗಸ್ಟ್ 2023, 2:06 IST
Last Updated 6 ಆಗಸ್ಟ್ 2023, 2:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದ ಅಲೋಕ್‌ ಮೋಹನ್‌ ಅವರನ್ನು ಅದೇ ಹುದ್ದೆಗೆ ಕಾಯಂ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

2020 ಜನವರಿ 31ರಂದು ರಾಜ್ಯದ 41ನೇ ಡಿಜಿ–ಐಜಿಪಿ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರವೀಣ್ ಸೂದ್ ಅವರನ್ನು ಕೇಂದ್ರೀಯ ತನಿಖಾ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಮೇ ತಿಂಗಳಿನಲ್ಲಿ ನೇಮಕ ಮಾಡಲಾಗಿತ್ತು. ಇದರಿಂದಾಗಿ ತೆರವಾಗಿದ್ದ ಡಿಜಿ–ಐಜಿಪಿ ಹುದ್ದೆಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಆಗಿದ್ದ ಅಲೋಕ್ ಮೋಹನ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿತ್ತು.

ಮೇ 22ರಂದು ಅಧಿಕಾರ ವಹಿಸಿಕೊಂಡಿರುವ ಅಲೋಕ್‌ ಮೋಹನ್ ತಮ್ಮ ಕೆಲಸ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಅಲೋಕ್‌ ಮೋಹನ್ ಅವರನ್ನು ರಾಜ್ಯದ 42ನೇ ಡಿಜಿ– ಐಜಿಪಿ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಹಾರ ರಾಜ್ಯದ ಪಟ್ನಾದ ಅಲೋಕ್‌ ಮೋಹನ್, 1987ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಎಂ.ಎಸ್‌ಸಿ ಹಾಗೂ ಎಂ.ಫಿಲ್ ಪದವೀಧರ. ಅಲೋಕ್‌ ಮೋಹನ್ ಅವರ ಅಧಿಕಾರಾವಧಿ ಒಂದು ವರ್ಷ ಎಂಟು ತಿಂಗಳಿದ್ದು, 2025ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT