ಬೆಂಗಳೂರು: ಹುದ್ದೆಯಾಧಾರಿತ ಪದ್ಧತಿ ಅಳವಡಿಸಿ ತಮ್ಮ ವಲಯ ಹಾಗೂ ಕಮಿಷನರೇಟ್ ಘಟಕಗಳಲ್ಲಿನ ಸಿಬ್ಬಂದಿಗೆ ಜ್ಯೇಷ್ಠತೆಯ ಅನುಸಾರ ಪಿಎಸ್‌ಐ ಹುದ್ದೆಗೆ ಮುಂಬಡ್ತಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

‘ಪಿಎಸ್ಐ 545 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಪ್ರಸಕ್ತ ವಿದ್ಯಮಾನಗಳನ್ನು ಗಮನಿಸಿದರೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವುದು ಇನ್ನೂ ಸ್ವಲ್ಪ ತಡವಾಗುವ ಸಾಧ್ಯತೆ ಇದೆ. ಹೀಗಾಗಿ ಒಂದು ವರ್ಷದಲ್ಲಿ ವಯೋ ನಿವೃತ್ತಿ ಹೊಂದಲಿರುವ, ವಯೋ ನಿವೃತ್ತಿ ಅಂಚಿನಲ್ಲಿರುವ ಎಎಸ್ಐಗಳಿಗೆ ಪಿಎಸ್ಐಗಳಾಗಿ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಿ. ಮುಂಬಡ್ತಿ ಹುದ್ದೆಗಳು ಇಲ್ಲದಿದ್ದಲ್ಲಿ, ಅಂತಹ ಸಿಬ್ಬಂದಿಗೆ ಸಂಬಂಧಪಟ್ಟ ಹುದ್ದೆಯ ಜ್ಯೇಷ್ಠತಾ ಪಟ್ಟಿಯಲ್ಲಿ ಜ್ಯೇಷ್ಠತೆ ಮತ್ತು ಮುಂಬಡ್ತಿಗೆ ಪರಿಗಣಿಸುವ ತೃಪ್ತಿಕರ ಸೇವೆಯನ್ನು ಆಧರಿಸಿಕೊಂಡು, ನಿಯಮಾನುಸಾರ ನೇರ ನೇಮಕಾತಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಸ್ವತಂತ್ರ ಪ್ರಭಾರದಲ್ಲಿರಿಸಲು ಕ್ರಮ ಜರುಗಿಸಿ’ ಎಂದು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.