ಬೆಂಗಳೂರು: ಮಹಿಳೆ ಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೊ ವೊಂದು ಸಾಮಾಜಿಕ ಜಾಲತಾಣ ದಲ್ಲಿ ಹರಿದಾಡಿದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾ ಲಯದ (ಡಿಸಿಆರ್ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಅಮಾನುತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರದಲ್ಲಿ ಕಚೇರಿಯ ಕುರ್ಚಿಯಲ್ಲಿ ಕುಳಿತು ಮಹಿಳೆಯನ್ನು ಅಪ್ಪಿಕೊಳ್ಳುತ್ತಿರುವ ಹಾಗೂ ಮುತ್ತಿಡುವ ವಿಡಿಯೊ ಜಾಲತಾಣ ಗಳಲ್ಲಿ ಹರಿದಾಡಿತ್ತು. ಇದು ಸರ್ಕಾರಕ್ಕೆ
ಮುಜುಗರವನ್ನುಂಟು ಮಾಡಿತ್ತು.

ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತಾಧಿಕಾರಿಗಳಿಗೆ ಸೂಚಿಸಿದ್ದರು.

‘ಸರ್ಕಾರಿ ಅಧಿಕಾರಿಯಾದ ಡಿಜಿಪಿ ರಾಮಚಂದ್ರ ರಾವ್ ಅವರು ಯೋಗ್ಯ ವಲ್ಲದ ರೀತಿಯಲ್ಲಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತೆ ವರ್ತಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೊ, ವರದಿ ಗಳನ್ನು ಪರಿಶೀಲಿಸಿದಾಗ ಅವರ ನಡವಳಿಕೆಯಿಂದ ಅಖಿಲ ಭಾರತ ಸೇವಾ (ನಡತೆ) ನಿಯಮಗಳು-1968ರ ನಿಯಮ 3ರ ಉಲ್ಲಂಘನೆಯಾಗಿದೆ ಎಂದು ಮನವರಿಕೆಯಾಗಿದೆ. ಹಾಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ವಿರುದ್ಧ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ರಾಮಚಂದ್ರ ರಾವ್, ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಸದಾಶಿವನಗರದ ಮನೆಯಲ್ಲಿ ಸೋಮವಾರ ಭೇಟಿಯಾಗಿ ಪ್ರಕರಣದ ಕುರಿತು ಸ್ಪಷ್ಟನೆ ಕೊಡಲು ಪ್ರಯತ್ನಿಸಿದ್ದರು. ಆದರೆ, ಪರಮೇಶ್ವರ ಅವರು ಭೇಟಿಯಾಗಿರಲಿಲ್ಲ.

ಅಮಾನತು ಆದೇಶ ಹೊರಬೀಳು ತ್ತಿದ್ದಂತೆಯೇ ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿ, ಕಾನೂನು ಹೋರಾಟದ ಕುರಿತು ವಕೀಲರ ಜತೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

‘ವಜಾಗೊಳಿಸಲು ಅವಕಾಶ’

‘ಹಿರಿಯ ಅಧಿಕಾರಿ ಎಂಬುದನ್ನು ನೋಡದೆ ರಾಮಚಂದ್ರ ರಾವ್ ವಿರುದ್ಧ ಕ್ರಮ ಜರುಗಿಸಿದ್ದೇವೆ. ಪ್ರಕರಣ ಸಾಬೀತಾದರೆ ಅವರು ವಜಾ ಸಹ ಆಗಬಹುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

‘ಸುದ್ದಿ ಪ್ರಸಾರವಾದ ಬಳಿಕ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಖ್ಯಮಂತ್ರಿಯವರ ಬಳಿ ಚರ್ಚಿಸಿದ್ದೆ. ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಇಲಾಖೆಯಲ್ಲಿ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ನಡೆಯಲು ಬಿಡಬಾರದೆಂದು ಅವರು ಸೂಚನೆ ಕೊಟ್ಟಿದ್ದರು’ ಎಂದರು.

‘ರಾಮಚಂದ್ರ ರಾವ್ ವಿರುದ್ಧದ ಆರೋಪ ಸುಳ್ಳು ಎಂದಾದರೆ ತನಿಖೆ ಬಳಿಕ ನೋಡೋಣ. ಇಂತಹ ವರ್ತನೆ ಯಾರಿಗೂ ಗೌರವ ತರುವುದಿಲ್ಲ ಎಂದು ಅಮಾನತು ಮಾಡಿದ್ದೇವೆ. ಪ್ರಕರಣದ ಸಂತ್ರಸ್ತೆ ಬಗ್ಗೆ ಮಾಹಿತಿಯಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ಬೇರೆ ಬೇರೆ ಆಯಾಮಗಳೇನು ಎಂಬುದನ್ನು ತಿಳಿದು ಕ್ರಮ ಕೈಗೊಳ್ಳುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ರಾಮಚಂದ್ರ ರಾವ್ ಭೇಟಿಗೆ ಅನುಮತಿ ನಿರಾಕರಿಸಿದ ಬಗ್ಗೆ ಪ್ರತಿಕ್ರಿಯಿಸಿ, ‘ನಾನು ವಿಶ್ರಾಂತಿಯಲ್ಲಿದ್ದೆ. ಅವರನ್ನು ಭೇಟಿ ಸಹ ಮಾಡುತ್ತಿರಲಿಲ್ಲ. ಇಂತಹ ಸನ್ನಿವೇಶದಲ್ಲಿ ನಾವು ಬಹಳ ಎಚ್ಚರದಿಂದ ಇರಬೇಕು’ ಎಂದರು.

ಎಲ್ಲಾ ಆಯಾಮದಿಂದ ತನಿಖೆ

ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೊಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಡಿಯೊ ಚಿತ್ರೀಕರಣ ಮಾಡಿದ್ದು ಯಾವಾಗ? ವಿಡಿಯೊದಲ್ಲಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ.

ಬೆಳಗಾವಿ ವಲಯದ ಐಜಿಪಿಯಾಗಿ ರಾಮಚಂದ್ರ ರಾವ್ ಅವರನ್ನು ಎಂಟು ವರ್ಷಗಳ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆ ಸಂದರ್ಭದಲ್ಲಿನ ಘಟನೆಯ ವಿಡಿಯೊ ಈಗ ಬಹಿರಂಗವಾಗಿರಬಹುದು ಎಂಬ ಅನುಮಾನವಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಬಳಸಿ ಮಾಡಿದ ವಿಡಿಯೊ ಅಥವಾ ಎಡಿಟ್ ಮಾಡಿರುವ ವಿಡಿಯೊ ಇದಾಗಿದೆ’ ಎಂದು ರಾಮಚಂದ್ರ ರಾವ್ ಅವರು ಹೇಳಿಕೆ ನೀಡಿದ್ದಾರೆ. ಬೇರೆ ಬೇರೆ ಸಂದರ್ಭಗಳಲ್ಲಿ ತೆಗೆದ ಮೂರು ವಿಡಿಯೊಗಳನ್ನು ಒಟ್ಟಾಗಿ ಸೇರಿಸಿರುವ 47 ಸೆಕೆಂಡಿನ ವಿಡಿಯೊ ತುಣುಕು ಹರಿದಾಡುತ್ತಿದೆ. ಅಲ್ಲದೇ ಮಹಿಳೆ ಜತೆ ಸಲುಗೆಯಿಂದ ಮಾತನಾಡಿರುವ ಆಡಿಯೊ ಕ್ಲಿಪ್ಗಳು ಹರಿದಾಡುತ್ತಿವೆ. ಅವುಗಳ ನೈಜತೆ ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗುವುದು. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.
.ಮಹಿಳೆಯೊಂದಿಗೆ ಅಸಭ್ಯ ವರ್ತನೆ ವಿಡಿಯೊ: ತನಿಖೆಗೆ ಆಗ್ರಹಿಸಿದ DGP ರಾಮಚಂದ್ರ ರಾವ್.ಕಚೇರಿಯಲ್ಲೇ ರಾಸಲೀಲೆ; ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಕ್ರಮ: ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.