ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬರ್ಗಳಿಗೆ ವಿದೇಶಿ ದೇಣಿಗೆ ಬಂದಿರುವ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಲು ಜೆಡಿಎಸ್ ಮುಂದಾಗಿದೆ.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ‘ವಿದೇಶಿ ದೇಣಿಗೆ ಬಂದಿರುವುದನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರದ ಎಸ್ಐಟಿಯಿಂದ ಸಾಧ್ಯವಿಲ್ಲ. ಹೀಗಾಗಿಯೇ ಎನ್ಐಎ ತನಿಖೆ ಅಗತ್ಯವಾಗಿದೆ. ಎನ್ಐಎ ತನಿಖೆಗೆ ಒತ್ತಾಯಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಸಿದ್ಧತೆ ನಡೆಸಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎನ್ಐಎ ತನಿಖೆ ನಡೆಸುವಂತೆ ಮನವಿ ಸಲ್ಲಿಸಲು ಕುಮಾರಸ್ವಾಮಿಯವರು ಸಿದ್ಧತೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.