ಬೆಂಗಳೂರು: ‘ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯಾ ಭಟ್ ಪ್ರಕರಣದ ದೂರುದಾರೆ ಸುಜಾತಾ ಭಟ್ ಅವರನ್ನು ಎರಡು ವಾರಗಳಿಂದ ಕೆಲವು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ, ಹೇಳಿಕೆ ನೀಡಲು ಒತ್ತಾಯಿಸುತ್ತಿದ್ದಾರೆ. ಇದರಿಂದ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಸೂಚಿಸಿದ್ದಾರೆ.

ಈ ಬಗ್ಗೆ ಎಸ್ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿರುವ ಅವರು, ‘ಕೆಲ ಮಾಧ್ಯಮಗಳು ಸುಜಾತಾ ಭಟ್ ಅವರ ತೇಜೋವಧೆ ಮಾಡುವ ರೀತಿಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿವೆ. ತಡ ರಾತ್ರಿಯಲ್ಲಿ ಅವರ ಮನೆಗೆ ಹೋಗಿ ವಿಡಿಯೊ ಚಿತ್ರೀಕರಣ ಮಾಡಿ, ಕಾರಿನಲ್ಲಿ ಕೂರಿಸಿಕೊಂಡು ತನಿಖೆಯ ದಿಕ್ಕು ತಪ್ಪಿಸುವ ಹಾಗೆ ವೈರುಧ್ಯಗಳಿಂದ ಕೂಡಿದ ಹೇಳಿಕೆ ಪಡೆದು, ಅವರನ್ನು ಮಾನಸಿಕವಾಗಿ ಕುಗ್ಗಿಸುವ ವರದಿ ಪ್ರಸಾರ ಮಾಡಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರು, ನಿರ್ಭೀತಿಯಿಂದ ದೂರನ್ನು ನೀಡಲು ಎಸ್ಐಟಿ ಅವಕಾಶ ನೀಡಬೇಕು. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಟ್ಟು, ಅವರಿಗೆ ರಕ್ಷಣೆ ನೀಡಬೇಕು. ಸುಜಾತಾ ಭಟ್ ಅವರು ಕೆಲ ಮಾಧ್ಯಮಗಳ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗುವ ಸಾಧ್ಯತೆ ಇದೆ. ಈ ವಿಷಯವನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಸುಜಾತಾ ಭಟ್ ಅವರಿಗೆ ಭದ್ರತೆ ಒದಗಿಸಿ, ಅವರ ಅಹವಾಲು ಸಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಲಕ್ಷ್ಮಿಗೆ ವಿರುದ್ಧ ಅವಹೇಳನಕಾರಿ ಸಂದೇಶ: ಕ್ರಮಕ್ಕೆ ಆಗ್ರಹ

‘ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಮಗನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದೂ ಡಾ. ನಾಗಲಕ್ಷ್ಮೀ ಚೌಧರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಕಮಿಷನರ್ ಅವರಿಗೆ ಪತ್ರ ಬರೆದಿರುವ ಅವರು ‘ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣಿನ ಸ್ವಾಭಿಮಾನ ಹಾಗೂ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು. ಈ ಬಗ್ಗೆ 15 ದಿನಗಳಲ್ಲಿ ವರದಿ ನೀಡಬೇಕು’ ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.