ಬೆಂಗಳೂರು: ‘ಧರ್ಮಸ್ಥಳದ ವಿಷಯದಲ್ಲಿ ದೂರುದಾರನಿಗೆ ‘ಮಾಸ್ಕ್’ ಹಾಕಿಸಿದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇದೀಗ ತಾವೇ ಮುಖವಾಡ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಂಡಿಗಳಲ್ಲಿ ಏನೂ ಸಿಕ್ಕದೇ ಇರುವುದರಿಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಆತಂಕದಲ್ಲಿದ್ದಾರೆ. ದೂರುದಾರನಿಗೆ ಮುಖವಾಡ ಹಾಕುವ ನಿರ್ಧಾರ ಮಾಡಿದ್ದರು. ಈಗ ದೂರುದಾರನ ಮುಖವಾಡವೂ ಕಳಚಿ ಬಿದ್ದಿದೆ ಎಂದರು.

‘ಸಿದ್ದರಾಮಯ್ಯ ಅವರು ಎಡಪಂಥೀಯ ಶಕ್ತಿಗಳ ಒತ್ತಡಕ್ಕೆ ಮಣಿದು ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆಗೆ ಆದೇಶಿಸಿದರು. ನಾವೂ ಅದನ್ನು ಸ್ವಾಗತ ಮಾಡಿದ್ದೆವು. ಗುಂಡಿ ಬಗೆದಂತೆ ಏನೋ ಸಿಕ್ಕುವುದಾಗಿ ವಿಧಾನಸೌಧದಲ್ಲಿ ಕುಳಿತು ಸಿದ್ದರಾಮಯ್ಯ ಕನಸು ಕಾಣುತ್ತಿದ್ದರು. 15–16 ಗುಂಡಿಗಳನ್ನು ತೋಡಿದರೂ ಧರ್ಮಸ್ಥಳದಲ್ಲಿ ಏನೂ ಸಿಕ್ಕಿಲ್ಲ’ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.