ಧಾರವಾಡ: ‘ಕಾನೂನು ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಎಚ್. ಮಿಟ್ಟಲಕೋಡ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಕಾನೂನು ಹಾಗೂ ನ್ಯಾಯ ಮಂಟಪದಿಂದ ಇಲ್ಲಿನ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ`ಪೊಕ್ಸೊ’ ಕಾಯ್ದೆ ಕುರಿತು ಮಾತನಾಡಿದರು.

‘ಖೊಟ್ಟಿ ಪ್ರಕರಣಗಳನ್ನು ದಾಖಲಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸುಳ್ಳು ಪ್ರಕರಣ ದಾಖಲಿಸುವವರು, ಶಾಮೀಲಾದ ಪೊಲೀಸರು, ಸಾಕ್ಷಿದಾರರು ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕು’ ಎಂದರು.

‘ನಿರಪರಾಧಿಗಳಿಗೆ ಶಿಕ್ಷೆಯಾಗಬಾರದು. ಕಾನೂನನ್ನು ಗುರಾಣಿಯಾಗಿ ಬಳಸಿಕೊಳ್ಳಬೇಕೇ ಹೊರತು ಕತ್ತಿಯಂತೆ ಬಳಸಿಕೊಳ್ಳಬಾರದು’ ಎಂದು ಹೇಳಿದರು.

ಹುರಕಡ್ಲಿ ಕಾನೂನು ಕಾಲೇಜು ಪ್ರಾಚಾರ್ಯೆ ಸವಿತಾ ಪಾಟೀಲ ಮಾತನಾಡಿದರು. ಧಾರವಾಡ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್.ನೇಗಿನಹಾಳ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಮಂಗಳಗೌರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-24-1138918674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.