ಧಾರವಾಡ: ‘ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿಮಠ ಒತ್ತಾಯಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಟ್ಟಿನಲ್ಲಿ ಕೆಪಿಎಸ್ಸಿ ನಿಗದಿಪಡಿಸಿರುವ ಸಂದರ್ಶನವನ್ನು ರದ್ದುಗೊಳಿಸಬೇಕು. ಮರುಪರೀಕ್ಷೆ ನಡೆಸಿ, ಐವರು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಂದರ್ಶನ ನಡೆಸಬೇಕು’ ಎಂದು ಆಗ್ರಹಿಸಿದರು.

‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯನ್ನು ತಡವಾಗಿ ನೀಡಲಾಗಿದೆ. ಅದನ್ನು ಪ್ರಶ್ನಿಸಿದ್ದಕ್ಕೆ 12 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ’ ಎಂದು ದೂರಿದರು.

‘ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.86 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಹೋರಾಟ ಹಮ್ಮಿಕೊಳ್ಳುತ್ತೇವೆ’ ಎಂದು ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-406080644

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.