ಧಾರವಾಡ: ರಾಜ್ಯದ ಸುಮಾರು 1 ಕೋಟಿ 75 ಲಕ್ಷ ಗುತ್ತಿಗೆ ಕಾರ್ಮಿಕರಿಗೆ ತಕ್ಷಣವೇ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಮಗ್ರ ಕರ್ನಾಟಕ ಕಾರ್ಮಿಕರ ಹಿತರಕ್ಷಣಾ ಸಮಿತಿ, ದಾಂಡೇಲಿ ಕಾರ್ಮಿಕ ಸೇನಾ ಸಂಘಟನೆಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಆವರಣದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕಚೇರಿ ಎದುರು ಜಮಾಯಿಸಿದ ಕಾರ್ಮಿಕರು ಕೂಡಲೇ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಘೋಷಣೆ ಕೂಗಿದರು.

ಹಿರಿಯ ವಕೀಲ ಬಿ.ಡಿ ಹಿರೇಮಠ ಮಾತನಾಡಿ, ‘ದುಡಿಯುವ ಕೈಗಳು ಕನಿಷ್ಠ ವೇತನ ಸಿಗದೇ ಹಸಿವಿನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದಾರೆ. ಸರ್ಕಾರ ನಿರ್ಲಕ್ಷ ಧೋರಣೆ ತಾಳಿದ ಪರಿಣಾಮ, ದುಡಿಯುವ ಕೈಗಳಿಗೆ ಬರೆ ನೀಡಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಲ್ಲಿ ವ್ಯವಸ್ಥೆ ಕುಸಿದಿದೆ. ಕೂಡಲೇ ಕನಿಷ್ಠ ವೇತನ ಪರಿಷ್ಕರಣೆ ಮಾಡಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರವು ಮೇ 1ರಂದು ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕಾಗಿತ್ತು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ ಕ್ರಮ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿನೋದ ಎಸ್.ಬಿ.,ಶಂಕ್ರಯ್ಯ ಹಿರೇಮಠ, ಹನುಂಮತ ಕಾರ್ಗಿ, ಕಲ್ಲಪ್ಪ ಕೆಂಗಾನೂರ, ಡೆವಿಡ್, ಸಂತೋಷ ಬುಲಬುಲೆ, ಸಂದೀಪ ನಾಯ್ಕ, ಸಂತೋಷ ಶಿಂಧೆ, ಗೋವಿಂದ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-24-1036718760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.